
ಪ್ರಜಾವಾಣಿ ವಾರ್ತೆ
ಪ್ರಾತಿನಿಧಿಕ ಪತ್ರ
ಕುಂದಗೋಳ: ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಮತ್ತು ಇತರ ಘಟಕಗಳನ್ನು ನಿರ್ಮಿಸಿಕೊಳ್ಳಲು ಆಸಕ್ತ ಅರ್ಹ ರೈತರು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಕ್ಕೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಕೃಷಿ ಇಲಾಖೆ ತಿಳಿಸಿದೆ.
ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬೇಕು. ಹಿಂದಿನ ವರ್ಷಗಳಲ್ಲಿ ಯೋಜನೆಯಡಿ, ತೋಟಗಾರಿಕೆ ಇಲಾಖೆ ಅಥವಾ ಇತರೆ ಸರ್ಕಾರದ ಯೋಜನೆಯಡಿ ಕೃಷಿ ಹೊಂಡ ನಿರ್ಮಿಸಿಕೊಂಡ ರೈತರು ಈ ಯೋಜನೆಗೆ ಅರ್ಹರಿರುವುದಿಲ್ಲ ಎಂದು ಕುಂದಗೋಳ ಸಹಾಯಕ ಕೃಷಿ ನಿರ್ದೇಶಕಿ ರೇಖಾ ಗಡ್ಡದವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.