ADVERTISEMENT

ಬನ್ನಿ ಕೃಷ್ಣಾ, ಮಹದಾಯಿ, ನವಲಿ ಸಂಕಲ್ಪ ಯಾತ್ರೆ ಏ.13ಕ್ಕೆ: ಎಸ್.ಆರ್. ಪಾಟೀಲ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2022, 7:09 IST
Last Updated 11 ಏಪ್ರಿಲ್ 2022, 7:09 IST

ಹುಬ್ಬಳ್ಳಿ: ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳನ್ನು ಶೀಘ್ರ ಅನುಷ್ಠಾನ ಮಾಡುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆ ಸಹಯೋಗದಲ್ಲಿ ಏಪ್ರಿಲ್ 13ರಂದು ಗದಗದ ನರಗುಂದದಿಂದ "ಬನ್ನಿ ಕೃಷ್ಣಾ, ಮಹದಾಯಿ, ನವಲಿ ಸಂಕಲ್ಪ ಯಾತ್ರೆ" ಹಮ್ಮಿಕೊಳಲಾಗಿದ್ದು, ಟ್ರ್ಯಾಕ್ಟರ್ ರ್ಯಾಲಿ ನಡೆಸಲಾಗುವುದು ಎಂದು ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆಯ ಅಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡುವುದಕ್ಕೆ ನಿರಂತರವಾಗಿ ನಿರ್ಲಕ್ಷಿಸಲಾಗುತ್ತಿದೆ‌. ನೀರಾವರಿ ಯೋಜನೆ ದಕ್ಷಿಣ ಕರ್ನಾಟಕದಲ್ಲಿ ಅನುಷ್ಠಾನವಾದಷ್ಟು ಇಲ್ಲಿ ಆಗಿಲ್ಲ‌.

ಹೀಗಾಗಿ, ಪಕ್ಷಾತೀತವಾಗಿ ಹೋರಾಟ ನಡೆಸಲಾಗುತ್ತಿದೆ. ನಾನು ಕಾಂಗ್ರೆಸ್ ಗೆ ಸೆಡ್ಡು ಹೊಡೆದು ಹೋರಾಟ ಮಾಡುತ್ತಿಲ್ಲ. ನಾನು ಅಪ್ಪನ (ಪಕ್ಷದ) ವಿರುದ್ಧ ಹೋಗುವುದಿಲ್ಲ. ಕಾಂಗ್ರೆಸ್ ನಾಯಕರು ಭಾಗವಹಿಸಬಹುದು ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.