ADVERTISEMENT

ಕ್ರಿಕೆಟ್‌ ಸ್ಕೋರರ್‌ಗಳಿಗೆ ಪ್ರವೇಶ ಪರೀಕ್ಷೆ 22ಕ್ಕೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 7:27 IST
Last Updated 14 ಫೆಬ್ರುವರಿ 2026, 7:27 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಧಾರವಾಡ ವಲಯವು ಆಸಕ್ತ ಸ್ಕೋರರ್‌ಗಳಿಗೆ ಫೆ.22ರಂದು ಭಾನುವಾರ ರಾಜ್‌ನಗರದ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಪ್ರವೇಶ ಪರೀಕ್ಷೆ ಹಮ್ಮಿಕೊಂಡಿದೆ. ಇದು ಬಹುಆಯ್ಕೆ ಪ್ರಶ್ನೆ ಆಧಾರಿತ ಪರೀಕ್ಷೆಯಾಗಿರುತ್ತದೆ. 

ಪ್ರವೇಶ ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳು ಕೋರ್ಸ್‌ ಮತ್ತು ಅಂತಿಮ ಸುತ್ತಿನ ಪರೀಕ್ಷೆಗೆ ಅರ್ಹರಾಗುತ್ತಾರೆ. 

ADVERTISEMENT

ಆಸಕ್ತರು ಫೆ.19ರೊಳಗೆ ರಾಜ್‌ನಗರದ ಕೆಎಸ್‌ಸಿಎ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಜಾಲತಾಣwww.ksca.crick ಮೂಲಕ ಪಡೆಯಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ: 0836-3508842 ಸಂಪರ್ಕಿಸಬಹುದು ಎಂದು ಕೆಎಸ್‌ಸಿಎ ಧಾರವಾಡ ವಲಯ ನಿಮಂತ್ರಕ ವೀರಣ್ಣ ಸವಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.