ಹುಬ್ಬಳ್ಳಿ: ಕ್ಷತ್ರಿಯ ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅಗ್ರಹಿಸಿ ಬೆಂಗಳೂರಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಅಕ್ಟೋಬರ್28ರ ಬೆಳಿಗ್ಗೆ 10 ರಿಂದ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ಣಾಟಕ ಕ್ಷತ್ರಿಯ ಒಕ್ಕೂಟದ ಸಂಚಾಲಕಿ ಸರಳಾ ಬಾಂಡಗೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಸಂಪುಟದಲ್ಲಿ ನಾಲ್ವರಿಗೆ ಅವಕಾಶ ನೀಡಬೇಕು. ಪ್ರವರ್ಗ 3ಎ ಯಿಂದ 2ಎ ಸೇರ್ಪಡೆ ಮಾಡಬೇಕು. ಕ್ಷತ್ರಿಯ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಆಗ್ರಹಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.