ADVERTISEMENT

ಕುಮಾರಸ್ವಾಮಿ ಕ್ಷಮೆಯಾಚಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2023, 4:25 IST
Last Updated 14 ಫೆಬ್ರುವರಿ 2023, 4:25 IST
ಹುಬ್ಬಳ್ಳಿಯ ಮಿನಿ ವಿಧಾನಸೌಧದ ಎದುರು ವಿಶ್ವವಿಪ್ರ ಸೇವಾ ಟ್ರಸ್ಟ್‌ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು
ಹುಬ್ಬಳ್ಳಿಯ ಮಿನಿ ವಿಧಾನಸೌಧದ ಎದುರು ವಿಶ್ವವಿಪ್ರ ಸೇವಾ ಟ್ರಸ್ಟ್‌ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು   

ಹುಬ್ಬಳ್ಳಿ: ಬ್ರಾಹ್ಮಣ ಸಮಾಜ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿರುದ್ಧ ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಖಂಡನೀಯವಾಗಿದ್ದು, ತಕ್ಷಣ ಬ್ರಾಹ್ಮಣ ಸಮಾಜದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ವಿಶ್ವವಿಪ್ರ ಸೇವಾ ಟ್ರಸ್ಟ್‌ ಸದಸ್ಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿಯ ಮಿನಿವಿಧಾನಸೌಧದ ಆವರಣದಲ್ಲಿ ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಟ್ರಸ್ಟ್‌ ಅಧ್ಯಕ್ಷ ಲಕ್ಷ್ಮಣ ಕುಲಕರ್ಣಿ ಮಾತನಾಡಿ, ‘ರಾಜಕೀಯ ದುರುದ್ದೇಶದಿಂದ ಕುಮಾರಸ್ವಾಮಿ, ಬ್ರಾಹ್ಮಣ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆಲ. ಯಾವುದೇ ಕಪ್ಪುಚುಕ್ಕೆಯಿಲ್ಲದೆ ರಾಜಕೀಯ ಜೀವನದ ನಡೆಸುತ್ತಿರುವ ಜೋಶಿ ವಿರುದ್ಧ ಆಧಾರರಹಿತ ಹೇಳಿಕೆ ನೀಡಿರುವುದು ಖಂಡನೀಯ. ಜೋಶಿ ಮುಖ್ಯಮಂತ್ರಿಯಾದರೆ ತಪ್ಪೇನಿದೆ. ಅವರೊಬ್ಬ ನಿಷ್ಠಾವಂತ, ಪ್ರಾಮಾಣಿಕ ರಾಜಕಾರಣಿ. ಕುಮಾರಸ್ವಾಮಿ ಕ್ಷಮೆ ಕೇಳದಿದ್ದರೆ, ಕಾನೂನು ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ADVERTISEMENT

ಸೇವಾ ಟ್ರಸ್ಟ್ ಪವನ ದೇಸಾಯಿ, ಎಚ್. ಮುರುಳಿಧರ, ಸತೀಶ ಹುದ್ದಾರ, ದತ್ತಮೂರ್ತಿ ಕುಲಕರ್ಣಿ, ಗಿರೀಶ ಜೋಶಿ, ಮನೋಹರ ಪರ್ವತಿ, ಎ.ಸಿ. ಗೋಪಾಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.