ADVERTISEMENT

ಕುಮಾರಸ್ವಾಮಿ ಹೇಳಿಕೆ ಶೋಭೆ ತರುವಂತದ್ದಲ್ಲ: ಜಗದೀಶ್ ಶೆಟ್ಟರ್ 

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2023, 9:27 IST
Last Updated 8 ಫೆಬ್ರುವರಿ 2023, 9:27 IST
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್   

ಹುಬ್ಬಳ್ಳಿ: ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ರಾಜಕಾರಣದಲ್ಲಿ ವೈಯಕ್ತಿಕ ವಿಷಯ ಮತ್ತು ಜಾತಿ ವಿಷಯಗಳ ಕುರಿತು ಮಾತನಾಡುವುದು ಸರಿಯಲ್ಲ. ಬ್ರಾಹ್ಮಣರ ಬಗ್ಗೆ ಅವರು ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆ ತರುವಂತದ್ದಲ್ಲ ಎಂದು ಶಾಸಕ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೊಡ್ಡ ಜವಾಬ್ದಾರಿಯುತ ಸ್ಥಾನದಲ್ಲಿದ್ದವರು ವೈಯಕ್ತಿಕ ವಿಚಾರಗಳು ಹಾಗೂ ಜಾತಿಯ ಕುರಿತು ಮಾತನಾಡಬಾರದು. ಜಾತಿಯ ಬಗ್ಗೆ ಮಾತನಾಡುವುದು ರಾಜಕೀಯ ನಾಯಕರಿಗೆ ಶೋಭೆ ತರುವುದಿಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಕೀಳುಮಟ್ಟದ ಭಾಷೆ ಬಳಸುವುದು ಸರಿಯಲ್ಲ ಎಂದರು.

ರಾಜ್ಯ ಬಜೆಟ್ ‌ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಉತ್ತರ ಕರ್ನಾಟಕ ಅಭಿವೃದ್ಧಿಗೆ ಮಾತ್ರವಲ್ಲದೆ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದಾಗಲಿದೆ. ಈ ಭಾಗಕ್ಕೆ ಅವಶ್ಯಕತೆ ಇರುವ ಅನುದಾನದ ಬಗ್ಗೆ ಉಲ್ಲೇಖ ಮಾಡುವ ಮೂಲಕ ರಾಜ್ಯ ನಾಯಕರ ಜೊತೆಗೆ ಸಮಾಲೋಚನೆ ನಡೆಸಲಾಗುತ್ತದೆ. ಉತ್ತರ ಕರ್ನಾಟಕಕ್ಕೆ ಪೂರಕವಾದ ಬಜೆಟ್ ಇದಾಗಿರಲಿದೆ ಎಂದು ತಿಳಿಸಿದರು.

ADVERTISEMENT

ಕೇಂದ್ರ ಸಚಿವ ಜೋಶಿ ಅವರು ಕಚೇರಿ ದುರ್ಬಳಕೆ ಕುರಿತು ಪ್ರತಿಕ್ರಿಯಿಸಿದ ಅವರು, ಆರೋಪ ಮಾಡುವ ಬದಲು ದಾಖಲೆಗಳಿದ್ದರೆ ದೂರು ಸಲ್ಲಿಸಲಿ. ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗದ ಬಗ್ಗೆ ಕೇಂದ್ರ ತನಿಖಾ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿ ಧನಾತ್ಮಕ ವರದಿ ಸಲ್ಲಿಸಿದೆ. ರೈಲ್ವೆ ಮಂಡಳಿಯ ಮುಂದಿನ ಸಭೆಯಲ್ಲಿ ವರದಿ ಕೈ ಸೇರಲಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.