
ಪ್ರಜಾವಾಣಿ ವಾರ್ತೆ
ಕುಂದಗೋಳ: ಪಟ್ಟಣದ ಕಲ್ಯಾಣಪುರಮಠದ ಬಸವಣ್ಣಜ್ಜನವರ ರಥೋತ್ಸವ ಶುಕ್ರವಾರ ಸಂಭ್ರಮದಿಂದ ಜರುಗಿತು.
ಮಠದ ಅಭಿನವ ಬಸವಣ್ಣಅಜ್ಜನವರು, ಶಿವಾನಂದ ಮಠದ ಶಿವಾನಂದ ಸ್ವಾಮೀಜಿ, ದುಮ್ಮಾಡದ ಸರ್ವಭೂಷಣ ಸ್ವಾಮೀಜಿ, ಕಮಡೊಳ್ಳಿಯ ಲೋಚನೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಡೊಳ್ಳು ಸೇರಿದಂತೆ ವಿವಿಧ ವಾದ್ಯಮೇಳ ಮೆರುಗು ತಂದಿತು. ಭಕ್ತರು ಬಾಳೆಹಣ್ಣು, ಉತ್ತುತ್ತಿ ಎಸೆದು ಭಕ್ತಿ ಸಮರ್ಪಿಸಿದರು.
ಬೆಳಿಗ್ಗೆಯಿಂದ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪೂಜೆ, ಅನ್ನಸಂತರ್ಪಣೆ, ಸಂಜೆ ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ‘ಕಲ್ಯಾಣಸಿರಿ ಪ್ರಶಸ್ತಿ’ ಪ್ರದಾನ ಸಮಾರಂಭ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.