ADVERTISEMENT

ಹುಬ್ಬಳ್ಳಿ | ಕಾನೂನು ವಿವಿ ಅಥ್ಲೆಟಿಕ್ಸ್ ನಾಳೆಯಿಂದ

​ಪ್ರಜಾವಾಣಿ ವಾರ್ತೆ
Published 24 ಜುಲೈ 2024, 4:12 IST
Last Updated 24 ಜುಲೈ 2024, 4:12 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಹುಬ್ಬಳ್ಳಿ: ‘ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಂತರ ಮಹಾ ವಿದ್ಯಾಲಯಗಳ ಎಂಟನೇ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ ಜುಲೈ 25 ಮತ್ತು 26ರಂದು ಧಾರವಾಡದ ಆರ್‌.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ನಡೆಯಲಿದೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಬಸವರಾಜು ಹೇಳಿದರು.

‘ವಿಶ್ವವಿದ್ಯಾಲಯ ವ್ಯಾಪ್ತಿಯ 56 ಕಾಲೇಜುಗಳ 262 ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸುವರು. ಕೋವಿಡ್ ಕಾರಣ ಎರಡು ವರ್ಷ ಕ್ರೀಡಾಕೂಟ ನಡೆದಿರಲಿಲ್ಲ’ ಎಂದು ಅವರು ಮಂಗಳವಾರ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

‘ಮೈಸೂರು, ಮಂಗಳೂರು, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಹುಬ್ಬಳ್ಳಿ ಮತ್ತು ಕಲಬುರಗಿ ವಲಯಗಳಲ್ಲಿ ಈಗಾಗಲೇ ಕ್ರೀಡಾಕೂಟ ನಡೆದಿದ್ದು, ಅಲ್ಲಿ ವಿಜೇತರಾದವರು ಈ ಕ್ರೀಡಾಕೂಟದಲ್ಲಿ ಭಾಗವಹಿಸುವರು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.