ADVERTISEMENT

ಹುಬ್ಬಳ್ಳಿ | ಕಾನೂನು ವಿ.ವಿ ವಿದ್ಯಾರ್ಥಿಗಳ ಪ್ರತಿಭಟನೆ: ವಿದ್ಯಾರ್ಥಿ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2021, 8:56 IST
Last Updated 13 ಡಿಸೆಂಬರ್ 2021, 8:56 IST

ಹುಬ್ಬಳ್ಳಿ: ಪ್ರಸಕ್ತ ಶೈಕ್ಷಣಿಕ ವರ್ಷದ 3 ಮತ್ತು 5ನೇ ಸೆಮಿಸ್ಟರ್‌ನ ತರಗತಿಗಳನ್ನು ಕೂಡಲೇ ಪ್ರಾರಂಭಿಸಬೇಕು ಹಾಗೂ ಭೌತಿಕ ಪರೀಕ್ಷೆಯ ಬದಲಾಗಿ ಅಸೈನ್ಮೆಂಟ್ ಮಾದರಿಯಲ್ಲಿ ಪರೀಕ್ಷೆ ನಡೆಸಬೇಕು ಎಂದು ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಸೋಮವಾರ ವಿದ್ಯಾರ್ಥಿಯೊಬ್ಬರು ಅಸ್ವಸ್ಥರಾಗಿದ್ದಾರೆ. ವಿದ್ಯಾರ್ಥಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ನಡೆದ ಪ್ರತಿಭಟನೆ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ತಳ್ಳಾಟವಾಗಿದೆ. ಹಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಪೊಲೀಸರಿಂದ ಹಲ್ಲೆ ಆರೋಪ: ವಿಶ್ವವಿದ್ಯಾಲಯದ ಮುಂದೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿ ಸಂತೋಷ ಎಂಬವರು ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.