ADVERTISEMENT

ವಕೀಲರ ಕಲ್ಯಾಣಕ್ಕಿಲ್ಲ ಯೋಜನೆ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2019, 11:21 IST
Last Updated 12 ಫೆಬ್ರುವರಿ 2019, 11:21 IST
ಬಜೆಟ್‌ನಲ್ಲಿ ವಕೀಲ ಸಮುದಾಯದ ಕಲ್ಯಾಣಕ್ಕೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಹುಬ್ಬಳ್ಳಿ ವಕೀಲರ ಸಂಘದ ಸದಸ್ಯರು ನೂತನ ನ್ಯಾಯಾಲಯ ಸಂಕೀರ್ಣದ ಎದುರು ಪ್ರತಿಭಟನೆ ನಡೆಸಿದರು
ಬಜೆಟ್‌ನಲ್ಲಿ ವಕೀಲ ಸಮುದಾಯದ ಕಲ್ಯಾಣಕ್ಕೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಹುಬ್ಬಳ್ಳಿ ವಕೀಲರ ಸಂಘದ ಸದಸ್ಯರು ನೂತನ ನ್ಯಾಯಾಲಯ ಸಂಕೀರ್ಣದ ಎದುರು ಪ್ರತಿಭಟನೆ ನಡೆಸಿದರು   

ಹುಬ್ಬಳ್ಳಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈಚೆಗೆ ಮಂಡಿಸಿದ ಬಜೆಟ್‌ನಲ್ಲಿ ವಕೀಲರ ಕಲ್ಯಾಣಕ್ಕೆ ಯಾವುದೇ ಹಣವನ್ನು ಮೀಸಲಿಟ್ಟಿಲ್ಲ. ಅನುದಾನವನ್ನೂ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ಹುಬ್ಬಳ್ಳಿ ವಕೀಲರ ಸಂಘದ ಸದಸ್ಯರು ಹೊಸೂರಿನಲ್ಲಿರುವ ನೂತನ ನ್ಯಾಯಾಲಯದ ಮಂಗಳವಾರ ಪ್ರತಿಭಟನೆ ನಡೆಸಿದರು.

ಅಳ್ನಾವರ ತಾಲ್ಲೂಕಿನ ಹೊಲ್ತಿಕೋಟಿ ಗ್ರಾಮದಲ್ಲಿ ನ್ಯಾಯಾಲಯದ ಆದೇಶದಂತೆ ಆಸ್ತಿ ಜಪ್ತಿ ಮಾಡಲು ಹೋದ ಧಾರವಾಡದ ಬೇಲಿಫರ ಮೇಲೆ ನಡೆದ ಹಲ್ಲೆಯನ್ನೂ ವಕೀಲರು ಖಂಡಿಸಿದರು.

ತಹಶೀಲ್ದಾರ್ ಪರವಾಗಿ ಸ್ಥಳಕ್ಕೆ ಬಂದ ಹೆಚ್ಚುವರಿ ತಹಶೀಲ್ದಾರ್‌ ಪ್ರಕಾಶ ನಾಶಿ ಮನವಿ ಪತ್ರ ಸ್ವೀಕರಿಸಿದರು.

ADVERTISEMENT

ಸಂಘದ ಅಧ್ಯಕ್ಷ ಅಶೋಕ ಬಳಿಗಾರ, ಪ್ರಧಾನ ಕಾರ್ಯದರ್ಶಿ ಗುರು ಹಿರೇಮಠ, ಜಯರಾಜ್ ಪಾಟೀಲ, ಬಿ.ವಿ. ಕೋರಿಮಠ. ಎಸ್.ಜಿ. ದೊಡ್ಡಮನಿ, ದೇವರಾಜ ವಿ. ಗೌಡರ, ಆರ್.ಎಚ್. ಕಾಮಧೇನು, ವಿಠ್ಠಲ ಸೋಮನಕೊಪ್ಪ, ಮಂಜುನಾಥ ಕಟ್ಟಿ, ಸೀಮಿತ ಶೆಟ್ಟರ್, ಶೋಭಾ ಹಾಗೂ ಸವಿತಾ ಹಾನಗಲ್ಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.