ADVERTISEMENT

ಕದಂಬ ಸೈನ್ಯದಿಂದ ಪತ್ರ ಚಳವಳಿ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2019, 15:12 IST
Last Updated 17 ಡಿಸೆಂಬರ್ 2019, 15:12 IST
ಹುಬ್ಬಳ್ಳಿ ಮುಖ್ಯ ಅಂಚೆ ಕಚೇರಿಯಲ್ಲಿ ಕದಂಬ ಸೈನ್ಯದ ಪದಾಧಿಕಾರಿಗಳು ಮಂಗಳವಾರ ಪತ್ರ ಚಳವಳಿ ನಡೆಸಿದರು
ಹುಬ್ಬಳ್ಳಿ ಮುಖ್ಯ ಅಂಚೆ ಕಚೇರಿಯಲ್ಲಿ ಕದಂಬ ಸೈನ್ಯದ ಪದಾಧಿಕಾರಿಗಳು ಮಂಗಳವಾರ ಪತ್ರ ಚಳವಳಿ ನಡೆಸಿದರು   

ಹುಬ್ಬಳ್ಳಿ: ಕನ್ನಡಿಗರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ದೊರೆಯಬೇಕು ಎಂದರೆ ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕು. ಸರ್ಕಾರದ ಮೇಲೆ ಒತ್ತಡ ಹಾಕುವ ನಿಟ್ಟಿನಲ್ಲಿ ಕನ್ನಡ ಚಿತ್ರರಂಗದ ನಟ, ನಟಿಯರು ಹೋರಾಟದ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿ ಕದಂಬ ಸೈನ್ಯದ ಪದಾಧಿಕಾರಿಗಳು ಮಂಗಳವಾರ ಪತ್ರ ಚಳವಳಿ ನಡೆಸಿದರು.

ಚಿತ್ರ ನಟರಾದ ಶಿವರಾಜಕುಮಾರ್‌, ಪುನೀತ್‌ ರಾಜಕುಮಾರ್‌ ಹಾಗೂ ಇತರರಿಗೆ ಹೋರಾಟದ ಮುಂದಾಳತ್ವ ವಹಿಸಿಕೊಳ್ಳಬೇಕು ಎಂಬ ಪತ್ರವನ್ನು ಮುಖ್ಯ ಅಂಚೆ ಕಚೇರಿಯಿಂದ ರವಾನಿಸಿದರು.

ಕದಂಬ ಸೈನ್ಯದ ರಾಜ್ಯ ಘಟಕದ ಅಧ್ಯಕ್ಷ ಬೇಕ್ರಿ ರಮೇಶ ಮಾತನಾಡಿ,‘ಕನ್ನಡಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ದೊರಕಿಸಲು ಹೋರಾಟ ಮಾಡಬೇಕಿದೆ. ಜನಪ್ರತಿನಿಧಿಗಳು ರಾಜಕಾರಣ ಮಾಡುವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಚಿತ್ರ ನಟರು ಒಂದಾಗಿ ಹೋರಾಟದ ಮೂಲಕ ಅವರ ಮೇಲೆ ಒತ್ತಡ ತರಬೇಕು’ ಒತ್ತಾಯಿಸಿದರು.

ADVERTISEMENT

ಎ. ನಾಗೇಂದ್ರ, ವಿಜಯಕುಮಾರ ಶೆಟ್ಟಿ, ಮಂಜುನಾಥ ಬುರುಡಿ, ಎನ್‌. ರಾಜೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.