ADVERTISEMENT

ಲೆವೆಲ್ ಕ್ರಾಸಿಂಗ್ ಜಾಗೃತಿ ಸಪ್ತಾಹ

​ಪ್ರಜಾವಾಣಿ ವಾರ್ತೆ
Published 2 ಜೂನ್ 2019, 13:51 IST
Last Updated 2 ಜೂನ್ 2019, 13:51 IST
ಅಂತರರಾಷ್ಟ್ರೀಯ ಲೆವೆಲ್ ಕ್ರಾಸಿಂಗ್ ಜಾಗೃತಿ ಸಪ್ತಾಹದ ಅಂಗವಾಗಿ, ಹುಬ್ಬಳ್ಳಿಯ ರೈಲು ನಿಲ್ದಾಣದ ಬಳಿ ರೈಲ್ವೆ ಅಧಿಕಾರಿಗಳಿಂದ ಸುರಕ್ಷಾ ಜಾಗೃತಿ ಜಾಥಾ ನಡೆಯಿತು
ಅಂತರರಾಷ್ಟ್ರೀಯ ಲೆವೆಲ್ ಕ್ರಾಸಿಂಗ್ ಜಾಗೃತಿ ಸಪ್ತಾಹದ ಅಂಗವಾಗಿ, ಹುಬ್ಬಳ್ಳಿಯ ರೈಲು ನಿಲ್ದಾಣದ ಬಳಿ ರೈಲ್ವೆ ಅಧಿಕಾರಿಗಳಿಂದ ಸುರಕ್ಷಾ ಜಾಗೃತಿ ಜಾಥಾ ನಡೆಯಿತು   

ಹುಬ್ಬಳ್ಳಿ: ಅಂತರರಾಷ್ಟ್ರೀಯ ಲೆವೆಲ್ ಕ್ರಾಸಿಂಗ್ ಜಾಗೃತಿ ಸಪ್ತಾಹದ ಅಂಗವಾಗಿ,ನೈರುತ್ಯ ರೈಲ್ವೆಯು ಭಾನುವಾರ ಹುಬ್ಬಳ್ಳಿ ರೈಲು ನಿಲ್ದಾಣದ ಬಳಿ ವಿಶೇಷ ಜಾಗೃತಿ ಅಭಿಯಾನ ಆರಂಭಿಸಿತು.

ಹುಬ್ಬಳ್ಳಿ ವಿಭಾಗದ ವರಿಷ್ಠ ವಿಭಾಗೀಯ ಸುರಕ್ಷತಾ ಅಧಿಕಾರಿ ಜೆ.ಎಸ್. ರುದ್ರಸ್ವಾಮಿ ಅವರ ನೇತೃತ್ವದಲ್ಲಿ ವಿಭಾಗೀಯ ಕಚೇರಿಯಿಂದ ನಿಲ್ದಾಣದವರೆಗೆ ಜಾಗೃತಿ ನಡಿಗೆ ಹಮ್ಮಿಕೊಳ್ಳಲಾಗಿತು. ಈ ವೇಳೆ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಸಾರುವ ಘೋಷಣಾ ಪತ್ರಗಳನ್ನು ಪ್ರದರ್ಶಿಸಿ, ಘೋಷಣೆಗಳನ್ನು ಕೂಗಲಾಯಿತು.

ಲೆವೆಲ್ ಕ್ರಾಸಿಂಗ್ ಗೇಟ್‍ ದಾಟುವಾಗ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ 1,200ಕ್ಕೂ ಹೆಚ್ಚು ಜನರೊಂದಿಗೆ ಸಮಾಲೋಚನೆ ನಡೆಸಲಾಯಿತು. ಸುರಕ್ಷತೆಗೆ ಸಂಬಂಧಿಸಿದ ಮುನ್ನೆಚ್ಚರಿಕೆಗಳು, ಕಾನೂನುಗಳ ಕುರಿತು ಮಾಹಿತಿಯನ್ನು ಒಳಗೊಂಡ ಪೋಸ್ಟರ್‍ಗಳು, ಸ್ಟಿಕ್ಕರ್‍ಗಳು ಹಾಗೂ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.

ADVERTISEMENT

ಸಪ್ತಾಹದ ಅಂಗವಾಗಿ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯ ಲೆವೆಲ್ ಕ್ರಾಸಿಂಗ್ ಗೇಟ್‍ಗಳು ಹಾಗೂ ಇತರ ಸ್ಥಳಗಳಲ್ಲಿ ಈ ತಂಡಗಳು ಜಾಗೃತಿ ಕಾರ್ಯಕ್ರಮಗಳನ್ನು ಜೂನ್ 8ರವರೆಗೆ ಹಮ್ಮಿಕೊಳ್ಳಲಿವೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.