ಹುಬ್ಬಳ್ಳಿ: ಮೊಟ್ಟೆಗಳನ್ನು ತುಂಬಿಕೊಂಡು ಹೊರಟಿದ್ದ ಲಾರಿಯೊಂದು ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೊಟ್ಟೆಗಳು ಒಡೆದು ಹಾಳಾಗಿರುವ ಘಟನೆ ಮಂಗಳವಾರ ನಡೆದಿದೆ.
ಹುಬ್ಬಳ್ಳಿ- ಗದಗ ಮಾರ್ಗದ ಐಟಿಸಿ ಕಾರ್ಖಾನೆ ಸಮೀಪ ಘಟನೆ ಜರುಗಿದೆ. ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿದ್ದ ಮೊಟ್ಟೆಗಳ ಮೇಲೆಯೇ ವಾಹನಗಳು ಸಾಗುತ್ತಿದ್ದ ಚಿತ್ರಣ ಕಂಡು ಬಂತು.
ಮೊಟ್ಟೆಗಳನ್ನು ತುಂಬಿದ್ದ ಲಾರಿ ಕೊಪ್ಪಳದಿಂದ ಕುಮಟಾಕ್ಕೆ ಹೊರಟಿತ್ತು. ಅದಿರು ತುಂಬಿಕೊಂಡು ರಸ್ತೆ ಬದಿ ನಿಂತಿದ್ದ ಲಾರಿ ಗೋವಾಕ್ಕೆ ಹೊರಟಿತ್ತು. ಯಾರಿಗೂ ಜೀವಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.