ADVERTISEMENT

ಸಮಾಜಕ್ಕೆ ಮಾಚಿದೇವರ ಕೊಡುಗೆ ಅಪಾರ: ಪ್ರಕಾಶ ನಾಶಿ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2022, 3:49 IST
Last Updated 2 ಫೆಬ್ರುವರಿ 2022, 3:49 IST
ಹುಬ್ಬಳ್ಳಿಯ ಮಿನಿವಿಧಾನ ಸೌಧದಲ್ಲಿ ಮಂಗಳವಾರ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು
ಹುಬ್ಬಳ್ಳಿಯ ಮಿನಿವಿಧಾನ ಸೌಧದಲ್ಲಿ ಮಂಗಳವಾರ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು   

ಹುಬ್ಬಳ್ಳಿ: ಸಮಾಜದ ಅಭಿವೃದ್ಧಿಗೆ ಮಡಿವಾಳ ಮಾಚಿದೇವರ ಕೊಡುಗೆ ಅಪಾರವಾಗಿದೆ. ಅವರ ದಾರಿಯಲ್ಲಿ ಎಲ್ಲರೂ ನಡೆಯಬೇಕಾದ ಅವಶ್ಯಕತೆಯಿದೆ ಎಂದು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ ಹೇಳಿದರು.

ನಗರದ ಮಿನಿವಿಧಾನಸೌಧದ ಸಭಾಭವನದಲ್ಲಿ ಮಡಿವಾಳರ ಮಾಚಿದೇವರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿ ಮಾತನಾಡಿದರು.

ಮನವಿ: ಅನ್ನಪೂರ್ಣಮ್ಮ ವರದಿ ಮೇರೆಗೆ ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು. ಮಡಿವಾಳ ಸಮಾಜದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲಾಗಿದೆ. ಮಡಿವಾಳ ಮಾಚಿದೇವರ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರು ಹಾಗೂ ನಿರ್ದೇಶಕರ ನೇಮಕ ಮಾಡಬೇಕು ಎಂದು ಸಮಾಜದವರು ಮನವಿ ಮಾಡಿದರು.

ADVERTISEMENT

ಹುಬ್ಬಳ್ಳಿ ತಾಲ್ಲೂಕು ಮಡಿವಾಳರ ಹಿತಾಭಿವೃದ್ಧಿ ಸಂಘದ ಅಧ್ಯಕ್ಷ ರಂಗಸ್ವಾಮಿ ಬಳ್ಳಾರಿ, ಉಪಾಧ್ಯಕ್ಷ ಬಾಬು ಮಡಿವಾಳರ, ಕಾರ್ಯದರ್ಶಿ ಆನಂದ ಪಾಟೀಲ, ಸಹ ಕಾರ್ಯದರ್ಶಿ ಗುರುಸಿದ್ದಪ್ಪ, ಪರಶುರಾಮ ಸವಣೂರ, ಕಲ್ಲಪ್ಪ ಮಡಿವಾಳರ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.