ADVERTISEMENT

ಶಿವರಾತ್ರಿ ಸಂಭ್ರಮೋತ್ಸವ, ಅಹೋರಾತ್ರಿ ಸಂಗೀತೋತ್ಸವ ನಾಳೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 7:27 IST
Last Updated 14 ಫೆಬ್ರುವರಿ 2026, 7:27 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಹುಬ್ಬಳ್ಳಿ: ತಾಲ್ಲೂಕಿನ ಕಿರೇಸೂರ ಗ್ರಾಮದ ಸಿದ್ಧಲಿಂಗೇಶ್ವರ ದೇವಸ್ಥಾನ ಮತ್ತು ಸಿದ್ಧಲಿಂಗೇಶ್ವರ ಸೇವಾ ಸಮಿತಿ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ ಫೆ.15ರಂದು ಸಂಭ್ರಮೋತ್ಸವ ಹಾಗೂ ಅಹೋರಾತ್ರಿ ಸಂಗೀತೋತ್ಸವ ಹಮ್ಮಿಕೊಳ್ಳಲಾಗಿದೆ.

ದೇವಸ್ಥಾನದಲ್ಲಿ ಬೆಳಿಗ್ಗೆ ಸಿದ್ಧಲಿಂಗೇಶ್ವರ ಸ್ವಾಮಿಗೆ ಮಹಾರುದ್ರಾಭಿಷೇಕ ಹಾಗೂ ಸಹಸ್ರ ನಾಮಾವಳಿಯೊಂದಿಗೆ ಬಿಲ್ವಾರ್ಚನೆ, ಸಂಜೆ 7 ಗಂಟೆಗೆ ಮಹಾಮಂಗಳಾರತಿ ನೆರವೇರಲಿದೆ.

ADVERTISEMENT

‘ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ರಾತ್ರಿ 8 ಗಂಟೆಯಿಂದ ಸಂಗೀತೋತ್ಸವ ನಡೆಯಲಿದೆ. ಅಯ್ಯಪಯ್ಯ ಹಲಗಲಿಮಠ ಹಾಗೂ ರಾಜೇಶ್ವರಿ ಪಾಟೀಲ ಸಂಗೀತ ಕಾರ್ಯಕ್ರಮ ನಡೆಸಿಕೊಡುವರು. ರಾಮು ಕೊಡೇಕಲ್ ಹಾರ್ಮೋನಿಯಂ, ಗುರುಬಸವ ಮಹಾಮನೆ ವಯಲಿನ್, ಶ್ರೀಧರ ಜೂಜುರ ಬಾನ್ಸುರಿ, ಅಲ್ಲಮಪ್ರಭು ಕಡಕೋಳ ತಬಲಾ ಸಾಥ್ ನೀಡಲಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.