ADVERTISEMENT

ಮಹದಾಯಿಗಾಗಿಯೂ ಪಾದಯಾತ್ರೆ, ಪಕ್ಷದಲ್ಲಿ ಚರ್ಚೆ ನಡಿತಿದೆ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 24 ಜನವರಿ 2022, 10:07 IST
Last Updated 24 ಜನವರಿ 2022, 10:07 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಹುಬ್ಬಳ್ಳಿ: ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಮೇಕೆದಾಟು ಪಾದಯಾತ್ರೆ ಮಾದರಿಯಲ್ಲಿ ಹೋರಾಟ ಮಾಡಲಾಗುವುದು. ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಯುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಇಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ’ಮಹದಾಯಿ ಜೊತೆಗೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆಗ್ರಹಿಸಿಯೂ ಹೋರಾಟ ಮಾಡುತ್ತೇವೆ.ಮುಂದಿನ ದಿನಗಳಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ‘ ಎಂದು ಹೇಳಿದರು.

’ಮಹದಾಯಿ ನೀರು ತರುವುದಾಗಿ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಯಡಿಯೂರಪ್ಪ ನೀಡಿದ ಭರವಸೆ ಹುಸಿಯಾಗಿದೆ. ಉತ್ತರ ಕರ್ನಾಟಕ ಭಾಗಕ್ಕೆ ಈಗ ನೀರು ಬಂತಾ‘ ಎಂದು ಅವರು ಪ್ರಶ್ನಿಸಿದರು.

ADVERTISEMENT

’ಮೇಕೆದಾಟು ಪಾದಯಾತ್ರೆ ಹತ್ತಿಕ್ಕುವ ಉದ್ದೇಶದಿಂದ ವಾರಾಂತ್ಯದ ಕರ್ಪ್ಯೂ ಜಾರಿಗೆ ತರಲಾಯಿತು. ನಮ್ಮ ಪಕ್ಷದ ಪಾದಯಾತ್ರೆಯಿಂದ ಕೋವಿಡ್ ಹರಡಿಲ್ಲ. ಬಸವರಾಜ ಬೊಮ್ಮಾಯಿ, ಆರ್‌. ಅಶೋಕ ಹಾಗೂ ಸೋಮಶೇಖರ್‌ಗೆ ಕೋವಿಡ್‌ ಹರಡಿದ್ದು ನಮ್ಮ ಪಾದಯಾತ್ರೆಯಿಂದನಾ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.