ADVERTISEMENT

ಮಹದಾಯಿ; ಕಾಮಗಾರಿ ಆರಂಭಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2023, 15:41 IST
Last Updated 17 ಆಗಸ್ಟ್ 2023, 15:41 IST
ನವಲಗುಂದ ಪಟ್ಟಣದ ರೈತ ಭವನದಲ್ಲಿ ಮಹದಾಯಿ ಕಳಸಾ-ಬಂಡೂರಿ ರೈತ ಹೋರಾಟಗಾರರು ಶಿರಸ್ತೇದಾರರಾದ ಶೋಭಾ ಹುಲ್ಲಣ್ಣವರ ಅವರಿಗೆ ಮನವಿ ಸಲ್ಲಿಸಿದರು
ನವಲಗುಂದ ಪಟ್ಟಣದ ರೈತ ಭವನದಲ್ಲಿ ಮಹದಾಯಿ ಕಳಸಾ-ಬಂಡೂರಿ ರೈತ ಹೋರಾಟಗಾರರು ಶಿರಸ್ತೇದಾರರಾದ ಶೋಭಾ ಹುಲ್ಲಣ್ಣವರ ಅವರಿಗೆ ಮನವಿ ಸಲ್ಲಿಸಿದರು   

ನವಲಗುಂದ: ಮಹದಾಯಿ, ಕಳಸಾ –ಬಂಡೂರಿ ಕಾಮಗಾರಿಗೆ ಶೀಘ್ರ ಟೆಂಡರ್‌ ಕರೆದು ಕಾಮಗಾರಿ ಆರಂಭಿಸಬೇಕು ಎಂದು ರೈತ ಮುಖಂಡ ಸುಭಾಷಗೌಡ ಪಾಟೀಲ ಆಗ್ರಹಿಸಿದರು.

ಪಟ್ಟಣದ ಮಹದಾಯಿ ಕಳಸಾ-ಬಂಡೂರಿ ರೈತ ಹೋರಾಟ ವೇದಿಕೆಯಲ್ಲಿ ಶಿರಸ್ತೇದಾರರಾದ ಶೋಭಾ ಹುಲ್ಲಣ್ಣವರ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

‘ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಯೋಜನೆಗೆ ಅಡ್ಡಿಯಾಗಿರುವ ಎಲ್ಲ ಕಾನೂನಾತ್ಮಕವಾಗಿ ತೊಡಕುಗಳನ್ನು ನಿವಾರಿಸಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು’ ಎಂದರು.

ADVERTISEMENT

'ಎರಡು ತಿಂಗಳಲ್ಲಿ ಕಾಮಗಾರಿ ಆರಂಭಿಸದಿದ್ದರೆ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.

ಈ ವೇಳೆ ಸಿದ್ದಪ್ಪ ಮುಪ್ಪ್ಯನವರ, ಶಿವಪ್ಪ ಸಂಗಳದ, ಬಸನಗೌಡ ಪಕ್ಕೀರಗೌಡ್ರ, ಸಂಗಪ್ಪ ನಿಡವಣಿ, ಮುರಿಗೆಪ್ಪ ಪಲ್ಲೇದ, ಗಿರಿಯಪ್ಪ ಚಿಕ್ಕಣ್ಣವರ, ಯಲ್ಲಪ್ಪ ದಾಡಿಭಾವಿ, ಗೋವಿಂದರಡ್ಡಿ ಮೊರಬದ, ರವಿ ತೋಟದ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.