
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ‘ಕಳಸಾ ಬಂಡೂರಿ, ಮಹದಾಯಿ ಯೋಜನೆ ವಿಷಯ ಸುಪ್ರೀಂ ಕೋರ್ಟ್‌ನಲ್ಲಿದೆ. ಅಲ್ಲಿ ಪರಿಹಾರ ಸಿಗದೇ ಮುಂದುವರಿಯಲಾಗದು. ಪ್ರಕರಣವನ್ನು ಬೇಗ ಇತ್ಯರ್ಥಪಡಿಸಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಒತ್ತಾಯಿಸಿದರು.
‘ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಲ್ಲ ವಿಷಯ ಗೊತ್ತಿದ್ದರೂ ಹುಬ್ಬಳ್ಳಿಯ ಶಿರಗುಪ್ಪಿಯಲ್ಲಿ ಸುಳ್ಳು ಹೇಳಿ, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದು ಅವರಿಗೆ ಶೋಭೆ ತರುವುದಿಲ್ಲ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಕಾನೂನು ಸಚಿವ ಎಚ್.ಕೆ.ಪಾಟೀಲರು ಹಿಂದೆ ‘ಕೃಷ್ಣೆಯ ಕಣ್ಣೀರ ಕಥೆ ವ್ಯಥೆ’ ಪುಸ್ತಕ ಬರೆದಿದ್ದರು. ಈಗ ಮೌನ ವಹಿಸಿದ್ದಾರೆ. ಅವರು ಯುಕೆಪಿ ಯೋಜನೆಗೆ ₹20 ಸಾವಿರ ಕೋಟಿ ಕೊಡಿಸಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.