ADVERTISEMENT

‘ಜಲ ಸಂಜೀವಿನಿ ಸದ್ಬಳಕೆ ಮಾಡಿಕೊಳ್ಳಿ’

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2022, 2:57 IST
Last Updated 29 ಡಿಸೆಂಬರ್ 2022, 2:57 IST
ನವಲಗುಂದ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ರೈತ ದಿನಾಚರಣೆ ಅಂಗವಾಗಿ ತಾಲ್ಲೂಕು ಪಂಚಾಯಿತಿ ಇಒ ಭಾಗ್ಯಶ್ರೀ ಜಾಗೀರದಾರ ರೈತರೊಂದಿಗೆ ಸಂವಾದ ನಡೆಸಿದರು
ನವಲಗುಂದ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ರೈತ ದಿನಾಚರಣೆ ಅಂಗವಾಗಿ ತಾಲ್ಲೂಕು ಪಂಚಾಯಿತಿ ಇಒ ಭಾಗ್ಯಶ್ರೀ ಜಾಗೀರದಾರ ರೈತರೊಂದಿಗೆ ಸಂವಾದ ನಡೆಸಿದರು   

ನವಲಗುಂದ: ‘ಗ್ರಾಮಗಳ ಅಭಿವೃದ್ಧಿಗಾಗಿ ಸರ್ಕಾರ ‘ಜಲ ಸಂಜೀವಿನಿ’ ಯೋಜನೆ ಜಾರಿಗೆ ತಂದಿದೆ. ಇದರ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ತಾಲ್ಲೂಕು ಪಂಚಾಯಿತಿ ಇ.ಒ ಭಾಗ್ಯಶ್ರೀ ಜಾಗೀರದಾರ ಹೇಳಿದರು.

ತಾಲ್ಲೂಕಿನ ಹೆಬ್ಬಾಳ ಗ್ರಾಮದಲ್ಲಿ ರೈತ ದಿನಾಚರಣೆ ಅಂಗವಾಗಿ ‘ಜಲ ಸಂಜೀವಿನಿ’ ಯೋಜನೆ ಬಳಕೆ ಕುರಿತು ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನರೇಗಾ ಯೋಜನೆಯಡಿ ಕೃಷಿ ಸಾಗುವಳಿ ಪ್ರದೇಶದಲ್ಲಿ ಮಣ್ಣಿನ ತೇವಾಂಶ ಹೆಚ್ಚಿಸುವುದು ಹಾಗೂ ಮಣ್ಣಿನ ಫಲವತ್ತತೆ ಹೆಚ್ಚಿಸುವುದು, ರೇಷ್ಮೆ, ತೋಟಗಾರಿಕೆ ಇಲಾಖೆಗಳ ಮೂಲಕ ಹಸಿರು ಹೊದಿಕೆ ಪ್ರದೇಶ ಅಭಿವೃದ್ಧಿ, ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ ಮೂಲಕ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು.

ADVERTISEMENT

ಗ್ರಾಮ ಪಂಚಾಯಿತಿ ಅಧ್ಯಕ್ಷ ಮುತ್ತಪ್ಪ ಮಾಳಣ್ಣವರ, ಉಪಾಧ್ಯಕ್ಷೆ ಶೋಭಾ ಬಡಕಲಿ, ಪಿಡಿಒ ವೀರಭದ್ರಪ್ಪ ಹೊಸಳ್ಳಿ, ತಾಲ್ಲೂಕು ಪಂಚಾಯಿತಿ ತಾಂತ್ರಿಕ ಸಂಯೋಜಕ ಸುನೀಲಕುಮಾರ ಗೋಗಿ, ಸಂವಹನ ಸಂಯೋಜಕ ಪ್ರಕಾಶ ಅಕ್ಕಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.