ADVERTISEMENT

ಅಭಿವೃದ್ಧಿ ಪರವಾಗಿ ಕೆಲಸ ಮಾಡುವ ನಿತಿನ್ ಗಡ್ಕರಿ ಬಗ್ಗೆ ವಿಶೇಷ ಗೌರವವಿದೆ: ಖರ್ಗೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2022, 6:56 IST
Last Updated 1 ಮಾರ್ಚ್ 2022, 6:56 IST
ಹುಬ್ಬಳ್ಳಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ನಿತಿನ್ ಗಡ್ಕರಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಜತೆಯಲ್ಲಿದ್ದಾರೆ
ಹುಬ್ಬಳ್ಳಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ನಿತಿನ್ ಗಡ್ಕರಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಜತೆಯಲ್ಲಿದ್ದಾರೆ   

ಹುಬ್ಬಳ್ಳಿ: ಅಭಿವೃದ್ಧಿ ಪರವಾಗಿ ಕೆಲಸ ಮಾಡುವ ಸಚಿವ ನಿತಿನ್ ಗಡ್ಕರಿ ಅವರ ಬಗ್ಗೆ ನನಗೆ ವಿಶೇಷ ಗೌರವವಿದೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸೋಮವಾರ ನಡೆದ ₹12,795 ಕೋಟಿ ವೆಚ್ಚದ 925 ಕಿ.ಮೀ. ಉದ್ದದ 26 ರಾಷ್ಟ್ರೀಯ ಹೆದ್ದಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದ್ದಾರೆ. ಕೇಂದ್ರ ಭೂ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ನೆರವೇರಿಸಿದ್ದಾರೆ.

‘ರಾಜಕೀಯ ಬದಿಗಿಟ್ಟು ಗಡ್ಕರಿ ಅವರ ಕೆಲಸಗಳಿಗೆ ಮೆಚ್ಚುಗೆ ವ್ಯಕ್ತಪಡಿಸಲು ಇಲ್ಲಿಗೆ ಬಂದಿರುವೆ. ಮೊದಲ ಬಾರಿಗೆ ಗಡ್ಕರಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ’ ಎಂದು ಖರ್ಗೆ ಹೇಳಿದ್ದಾರೆ.

‘ಯಾವುದೇ ಅಭಿವೃದ್ಧಿ ಕೆಲಸಗಳ ಕುರಿತು ಗಡ್ಕರಿ ಅವರೊಂದಿಗೆ ಪ್ರಸ್ತಾಪಿಸಿದರೆ ತಕ್ಷಣ ಒಪ್ಪಿಗೆ ಕೊಡುತ್ತಾರೆ. ಯೋಜನೆಯೊಂದರ ಪ್ರಸ್ತಾವಕ್ಕೆ ಸಂಬಂಧಿಸಿದಂತೆ, ಹಿಂದೊಮ್ಮೆ ಕಾಂಗ್ರೆಸ್ ಪಕ್ಷದ ಕಚೇರಿಗೂ ಬಂದಿದ್ದರು. ಯಾವ ರಾಜ್ಯದವರು ಎಂದು ನೋಡದೆ ಕೆಲಸ ಮಾಡುವ ಇಂತಹ ವ್ಯಕ್ತಿಗಳು ನನಗೆ ಇಷ್ಟವಾಗುತ್ತಾರೆ. ಅಭಿವೃದ್ದಿ ವಿಷಯದಲ್ಲಿ ಯಾರೂ ರಾಜಕಾರಣ ಮಾಡಬಾರದು. ಅಂತಹರಿಗೆ ಅವರ ಕ್ಷೇತ್ರದಲ್ಲೇ ಗೌರವ ಸಿಗುವುದಿಲ್ಲ. ಭಾರತ ಮಾಲಾ ಯೋಜನೆಯಡಿ, ರಾಜ್ಯದ ಪ್ರತಿ ಜಿಲ್ಲೆಯ ರಸ್ತೆಗಳಿಗೆ ರಾಷ್ಟ್ರೀಯ ಹೆದ್ದಾರಿಗಳನ್ನು ಜೋಡಿಸಬೇಕು’ ಎಂದು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.