
ಪ್ರಜಾವಾಣಿ ವಾರ್ತೆಬಂಧನ
(ಪ್ರಾತಿನಿಧಿಕ ಚಿತ್ರ)
ಹುಬ್ಬಳ್ಳಿ: ‘ಇಲ್ಲಿನ ಮಂಟೂರ ರಸ್ತೆಯಲ್ಲಿ ನ.13ರಂದು ನಡೆದ ಮಲ್ಲಿಕ್ ಜಾನ್ ಕೊಲೆ ಪ್ರಕರಣದ ಏಳು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಹು–ಧಾ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಾಲು ಅಲಿಯಾಸ್ ಬಂಗಾರ ಬಾಲ್ಯಾ, ಮಹಮ್ಮದ್ ಹಫೀಜ್, ಸನ್ನಿ ಬಂಡಾರಿ, ಗೋಪಾಲ, ಕಿರಣ್, ಚಂದ್ರು ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಎಸಿಪಿ ಚಿಕ್ಕಮಠ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದ್ದು, ಉಳಿದ ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ’ ಎಂದರು.
‘ಕೊಲೆಯಾದ ಮಲ್ಲಿಕ್ ಜಾನ್ ಯಾವುದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರಲಿಲ್ಲ. ಆದರೆ, ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದವರ ಜತೆ ಗುರುತಿಸಿಕೊಂಡಿದ್ದ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.