ADVERTISEMENT

ಕಲಘಟಗಿ: ಮಾರಕಾಸ್ತ್ರಗಳಿಂದ ಹೊಡೆದು ಕೊಲೆ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2025, 3:15 IST
Last Updated 25 ಡಿಸೆಂಬರ್ 2025, 3:15 IST
ವಿಠ್ಠಲ ಬಸಪ್ಪ ಕುರಾಡೇ
ವಿಠ್ಠಲ ಬಸಪ್ಪ ಕುರಾಡೇ   

ಕಲಘಟಗಿ: ತಾಲ್ಲೂಕಿನ ಹುಣಸಿಕಟ್ಟಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬುಧವಾರ ನಡೆದಿದೆ. ಕೊಲೆಯಾದ ವ್ಯಕ್ತಿ ಕುಂದಗೋಳ ತಾಲ್ಲೂಕಿನ ರಾಮನಕೊಪ್ಪ ಗ್ರಾಮದ ನಿವಾಸಿ ವಿಠ್ಠಲ ಬಸಪ್ಪ ಕುರಾಡೆ (30) ಎಂದು ಗುರುತಿಸಲಾಗಿದೆ.

ದ್ಯಾವನಕೊಂಡ ಹುಣಸಿಕಟ್ಟಿ ಗ್ರಾಮದ ಮದ್ಯದ ರಸ್ತೆ ಪಕ್ಕದ ಬನ್ನಿ ಬಸವೇಶ್ವರ ದೇವಸ್ಥಾನದ ಎದುರುಗಡೆ ಯಾರೋ ದುಷ್ಕರ್ಮಿಗಳು ಕಬ್ಬಿಣದ ರಾಡ್‌ನಿಂದ ತಲೆ, ಮುಖ, ಕಾಲಿಗೆ ಹೊಡೆದು ಕೊಲೆ ಮಾಡಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಸಿಪಿಐ ಶ್ರೀಶೈಲ ಕೌಜಲಗಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ವ್ಯಕ್ತಿಯ ಮೃತ ದೇಹ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.