ADVERTISEMENT

ಮಾರುತ ಸಿನಿಮಾಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ; ಎಸ್.ನಾರಾಯಣ್‌

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2025, 4:48 IST
Last Updated 25 ನವೆಂಬರ್ 2025, 4:48 IST
   

ಹುಬ್ಬಳ್ಳಿ: ಈಶಾ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ನಿರ್ಮಿಸಿರುವ ಮಾರುತ ಸಿನಿಮಾಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ ಎಂದು ನಿರ್ದೇಶಕ ಎಸ್.ನಾರಾಯಣ್ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಿನಿಮಾದ ವಸ್ತು ಎಲ್ಲರಿಗೂ ಇಷ್ಟವಾಗಿದೆ. ಸಿನಿಮಾ ಮನರಂಜನಾ ಮಾಧ್ಯಮ. ಅದರ ಜತೆಗೆ ಸಮಾಜಕ್ಕೆ ಸಂದೇಶ ನೀಡುವ ಉದ್ದೇಶದಿಂದ ಈ ವಸ್ತುವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.

ಪ್ರಸ್ತುತ ಯುವಕರು ಸಾಮಾಜಿಕ ಜಾಲತಾಣಗಳನ್ನು ಹೆಚ್ಚು ಬಳಕೆ ಮಾಡುತ್ತಿದ್ದಾರೆ. ಅವುಗಳ ಬಳಿಕೆಯಲ್ಲಿ ಸ್ವಲ್ಪ ಎಚ್ಚರ ತಪ್ಪಿದರೆ ಅನಾಹುತಗಳು ನಡೆಯುತ್ತವೆ. ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾಗುವ ವ್ಯಕ್ತಿಗಳಿಂದ ಮೋಸ ಹೋಗಿ ಅನೇಕ ಯುವತಿಯರು ನರಳುತ್ತಿದ್ದಾರೆ ಎಂದರು.     

ADVERTISEMENT

ಸಿನಿಮಾದ ನಾಯಕನಾಗಿ ಶ್ರೇಯಸ್ ಮಂಜು, ನಾಯಕಿಯಾಗಿ ಬೃಂದಾ ಆಚಾರ್ಯ ಅಭಿನಯಿಸಿದ್ದು, ನಟ ದುನಿಯಾ ವಿಜಯ, ಸಾಧು ಕೋಕಿಲಾ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನೂರಾಧಾ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ, ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ ಅನೇಕರು ತಾರಾಬಳಗದಲ್ಲಿದ್ದಾರೆ. ವಿ.ರವಿಚಂದ್ರನ್‌ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಿದರು. 

ನಿರ್ಮಾಪಕರಾದ ಕೆ.ಮಂಜು, ರಮೇಶ ಯಾದವ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸಿನಿಮಾದ ಎರಡನೇ ಭಾಗ  ಬರಲಿದ್ದು, ಅದರ ಚಿತ್ರಕಥೆ ಸಿದ್ಧವಾಗುತ್ತಿದೆ ಎಂದರು.

ಶ್ರೇಯಸ್ ಮಂಜು ಮಾತನಾಡಿದರು. ನಿರ್ಮಾಪಕ ರಮೇಶ ಯಾದವ್, ಶಿವಾನಂದ ಮುತ್ತಣ್ಣವರ ಇದ್ದರು.