ಹುಬ್ಬಳ್ಳಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ (ಹೆಸ್ಕಾಂ) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ವೈಶಾಲಿ ಎಂ.ಎಲ್. ಗುರುವಾರ ಅಧಿಕಾರ ವಹಿಸಿಕೊಂಡರು.
ಮೊಹಮ್ಮದ್ ರೋಷನ್ ಅವರು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾದ ಕಾರಣ, ತೆರವಾಗಿದ್ದ ಸ್ಥಾನಕ್ಕೆ ವೈಶಾಲಿ ಎಂ.ಎಲ್. ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿತ್ತು. ವೈಶಾಲಿ ಅವರು ಗದಗ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.