
ಹುಬ್ಬಳ್ಳಿ: ‘ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ ಮನರೇಗಾ ಯೋಜನೆಗೆ ಮರುನಾಮಕರಣ ಮಾಡುವ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡಿಸಿದ್ದು, ಮಹಾತ್ಮ ಗಾಂಧಿಗೆ ಮಾಡಿರುವ ಅಪಮಾನ’ ಎಂದು ಶಾಸಕ ಪ್ರಸಾದ ಅಬ್ಬಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಗ್ರಾಮೀಣ ಭಾಗದ ಜನರ ಆರ್ಥಿಕ ಅಭಿವೃದ್ಧಿಯಲ್ಲಿ ಈ ಯೋಜನೆ ಪ್ರಮುಖ ಪಾತ್ರವಹಿಸಿದೆ. ಕೋವಿಡ್ ಸಂದರ್ಭದಲ್ಲಿ ಅನೇಕರಿಗೆ ಉದ್ಯೋಗ ಒದಗಿಸಿತ್ತು. ಇದೀಗ ಕೇಂದ್ರ ಸರ್ಕಾರವು ಯೋಜನೆಯ ಮೂಲ ನಿಯಮಗಳನ್ನು ತೆಗೆದು, ಕೇಂದ್ರ ಸರ್ಕಾರದ ಅನುದಾನವನ್ನು ಶೇ 60ರಷ್ಟು ಕಡಿತ ಮಾಡುವ ಅಂಶ ಮಸೂದೆಯಲ್ಲಿದೆ’ ಎಂದು ತಿಳಿಸಿದ್ದಾರೆ.
‘ಯುಪಿಎ ಸರ್ಕಾರದ ಯೋಜನೆಗಳಿಗೆ ಮರುನಾಮಕರಣ ಮಾಡುವುದೇ ಬಿಜೆಪಿ ಸಾಧನೆಯಾಗಿದೆ. ಸರ್ಕಾರಿ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿ, ಉದ್ಯಮಿಗಳ ಪರವಾಗಿ ಕೆಲಸ ಮಾಡುತ್ತಿದೆ’ ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.