ADVERTISEMENT

ಸಂಪುಟ ವಿಸ್ತರಣೆ ಸಿ.ಎಂ ವಿವೇಚನೆಗೆ ಬಿಟ್ಟಿದ್ದು: ಸಚಿವ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 8:11 IST
Last Updated 17 ನವೆಂಬರ್ 2020, 8:11 IST
 ಜಗದೀಶ ಶೆಟ್ಟರ್
ಜಗದೀಶ ಶೆಟ್ಟರ್    

ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ದೊಡ್ಡದಿದೆ. ಯಾರಿಗೆ ಕೊಡಬೇಕು, ಬಿಡಬೇಕು ಎಂಬುದನ್ನು ಸಿ.ಎಂ ತೀರ್ಮಾನಿಸಲಿದ್ದಾರೆ. ಎಲ್ಲರನ್ನೂ ಸರಿದೂಗಿಸಿಕೊಂಡು ಹೋಗುವ ಕೆಲಸವನ್ನು ನಾವು ಮಾಡಲಿದ್ದೇವೆ ಎಂದರು.

ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಯಾರಾಗಬೇಕೆಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.