ADVERTISEMENT

ಹುಬ್ಬಳ್ಳಿ: ಕ್ಯಾಮೆರಾಮ್ಯಾನ್ ಮನೆಗೆ ಸಚಿವ ಜಗದೀಶ ಶೆಟ್ಟರ್ ಭೇಟಿ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2020, 10:04 IST
Last Updated 6 ಅಕ್ಟೋಬರ್ 2020, 10:04 IST
ಪವರ್ ಟಿ.ವಿ ಸುದ್ದಿವಾಹಿನಿಯ ಕ್ಯಾಮೆರಾಮ್ಯಾನ್ ಸುನೀಲ ಪಾಚಂ ಮನೆಗೆ ಸಚಿವ ಜಗದೀಶ ಶೆಟ್ಟರ್ ಭೇಟಿ
ಪವರ್ ಟಿ.ವಿ ಸುದ್ದಿವಾಹಿನಿಯ ಕ್ಯಾಮೆರಾಮ್ಯಾನ್ ಸುನೀಲ ಪಾಚಂ ಮನೆಗೆ ಸಚಿವ ಜಗದೀಶ ಶೆಟ್ಟರ್ ಭೇಟಿ   

ಹುಬ್ಬಳ್ಳಿ: ಬೈಕ್ ಅಪಘಾತದಲ್ಲಿ ಮೃತಪಟ್ಟ ಹುಬ್ಬಳ್ಳಿಯ ಪವರ್ ಟಿ.ವಿ ಸುದ್ದಿವಾಹಿನಿಯ ಕ್ಯಾಮೆರಾಮ್ಯಾನ್ ಸುನೀಲ ಪಾಚಂ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮಂಗಳವಾರ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಬಳಿಕ ವೈಯಕ್ತಿಕವಾಗಿ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಶೆಟ್ಟರ್, ‘ಸುನೀಲ ಲವಲವಿಕೆಯ ಹುಡುಗನಾಗಿದ್ದ. ಅನೇಕ ಸಲ ಅವರನ್ನು ನೋಡಿದ್ದೇನೆ. ಆತನ ಆಕಾಲಿಕ ಸಾವು ನೋವುಂಟು ಮಾಡಿದೆ’ ಎಂದರು.

ಬಿಜೆಪಿ ಜಿಲ್ಲಾ ರೈತ ಮೋರ್ಚಾ ಘಟಕದ ಅಧ್ಯಕ್ಷ ಈಶ್ವರಗೌಡ ಪಾಟೀಲ, ರವಿ ಕಲಾಲ, ಸಂಗೀತಾ ಬದ್ದಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.