ಹುಬ್ಬಳ್ಳಿ: ‘ನಗರದಲ್ಲಿರುವ ತೆರೆದ ಒಳಚರಂಡಿಯನ್ನು ಮುಚ್ಚಲು ಪಾಲಿಕೆ ಆಯುಕ್ತರಿಗೆ ಈಗಾಗಲೇ ಸೂಚಿಸಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇತ್ತೀಚೆಗೆ ಸುರಿದ ಮಳೆಗೆ ಈವರೆಗೆ ಜಿಲ್ಲೆಯಲ್ಲಿ 120 ಮನೆಗಳು ಬಿದ್ದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಸರ್ಕಾರದಿಂದ ಪರಿಹಾರ ವಿತರಿಸುವ ಕಾರ್ಯ ನಡೆಯುತ್ತಿದೆ’ ಎಂದರು.
‘ನಗರದಲ್ಲಿ ಮಳೆ ನೀರಿನಿಂದ ಕೊಚ್ಚಿಹೋಗಿ ಮೃತಮಟ್ಟಿದ್ದ ಹುಸೇನಸಾಬ್ ಅವರ ಕುಟುಂಬಕ್ಕೆ ಸರ್ಕಾರದಿಂದ ₹5 ಲಕ್ಷ ಪರಿಹಾರ ವಿತರಿಸಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಬುಧವಾರ ಸುರಿದ ಅಬ್ಬರದ ಮಳೆಗೆ ಕೆಲವು ಸಮಸ್ಯೆಗಳು ಉಂಟಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.