ADVERTISEMENT

‘ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಿ’

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2022, 4:11 IST
Last Updated 16 ನವೆಂಬರ್ 2022, 4:11 IST
ಹುಬ್ಬಳ್ಳಿ ತಾಲ್ಲೂಕಿನ ಹೆಬಸೂರು ಗ್ರಾಮದಲ್ಲಿ ಏರ್ಪಡಿಸಿದ್ದ ಕಣ್ಣಿನ ಉಚಿತ ತಪಾಸಣಾ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಉದ್ಘಾಟಿಸಿದರು
ಹುಬ್ಬಳ್ಳಿ ತಾಲ್ಲೂಕಿನ ಹೆಬಸೂರು ಗ್ರಾಮದಲ್ಲಿ ಏರ್ಪಡಿಸಿದ್ದ ಕಣ್ಣಿನ ಉಚಿತ ತಪಾಸಣಾ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಉದ್ಘಾಟಿಸಿದರು   

ಹುಬ್ಬಳ್ಳಿ: ತಾಲ್ಲೂಕಿನ ಹೆಬಸೂರು ಗ್ರಾಮದಲ್ಲಿ ಮಂಗಳವಾರ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕ್ಷಮತಾ ಸೇವಾ ಸಂಸ್ಥೆ, ಡಾ. ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ ಕಣ್ಣಿನ ಉಚಿತ ತಪಾಸಣಾ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನುಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ‘ಒತ್ತಡದ ಜೀವನ, ವ್ಯವಸ್ಥಿತವಲ್ಲದ ಆಹಾರ ಕ್ರಮದಿಂದ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ವರ್ಷದಲ್ಲಿ ಒಂದು ಬಾರಿಯಾದರೂ ನೇತ್ರ ತಪಾಸಣೆ ಮಾಡಿಸಿಕೊಳ್ಳಬೇಕು. ಕಣ್ಣಿನ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಡಾ. ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಶ್ರೀನಿವಾಸ ಜೋಶಿ ಮಾತನಾಡಿದರು. ಶಿಬಿರದಲ್ಲಿ ಸುಮಾರು 350 ಜನರ ಕಣ್ಣು ತಪಾಸಣೆ ಮಾಡಿಕೊಂಡರು. 50 ಜನರನ್ನು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.

ADVERTISEMENT

ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಲ್ಲವ್ವ ಗಿ. ಕುರ್ಡಿಕೇರಿ ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷ ಸಂತೋಷ ಹೊನ್ನಿಹಳ್ಳಿ, ಮುರಲೀಧರ ಮಳಗಿ, ಗ್ರಾ.ಪಂ ಸದಸ್ಯ ಶಿವಾನಂದ ಲದ್ದಿ, ಕಾರ್ಯದರ್ಶಿ ಚನ್ನಪ್ಪ, ಅಶೋಕ ಮಂಡಿಗನಾಳ, ಗಿರೀಶ ಹೊನ್ನಿಹಳ್ಳಿ, ಪ್ರಭು ಬುಳಗಣ್ಣನವರ, ಸುರೇಶ ಹಡಪದ, ರತ್ನಾ ಚನ್ನದಾಸರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.