ADVERTISEMENT

ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಕಾಮಗಾರಿಗೆ ಶೆಟ್ಟರ್ ಭೂಮಿ ಪೂಜೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2020, 13:05 IST
Last Updated 21 ಜೂನ್ 2020, 13:05 IST
ಹುಬ್ಬಳ್ಳಿಯ ವಾರ್ಡ್ ನಂ. 47ರ ರಾಮನಗರದಲ್ಲಿ ಸ್ಲಂ ಬೋರ್ಡ್ ವತಿಯಿಂದ ನಿರ್ಮಿಸುತ್ತಿರುವ ಮನೆಗಳನ್ನು ಸಚಿವ ಜಗದೀಶ ಶೆಟ್ಟರ್ ವೀಕ್ಷಿಸಿದರು. ಬಿಜೆಪಿ ಮುಖಂಡರದ ಮಹೇಂದ್ರ ಕವತಾಳ್, ಲಿಂಗರಾಜ ಪಾಟೀಲ, ಮಲ್ಲಿಕಾರ್ಜುನ ಸಾವಕಾರ ಇದ್ದಾರೆ
ಹುಬ್ಬಳ್ಳಿಯ ವಾರ್ಡ್ ನಂ. 47ರ ರಾಮನಗರದಲ್ಲಿ ಸ್ಲಂ ಬೋರ್ಡ್ ವತಿಯಿಂದ ನಿರ್ಮಿಸುತ್ತಿರುವ ಮನೆಗಳನ್ನು ಸಚಿವ ಜಗದೀಶ ಶೆಟ್ಟರ್ ವೀಕ್ಷಿಸಿದರು. ಬಿಜೆಪಿ ಮುಖಂಡರದ ಮಹೇಂದ್ರ ಕವತಾಳ್, ಲಿಂಗರಾಜ ಪಾಟೀಲ, ಮಲ್ಲಿಕಾರ್ಜುನ ಸಾವಕಾರ ಇದ್ದಾರೆ   

ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ನಗರದ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಿದರು. ಈಗಾಗಲೇ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. ಸಸಿ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದರು.

ವಾರ್ಡ್ 47ರ ರಾಮನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಅವರು, ಕೊಳಚೆ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಾಣವಾಗುತ್ತಿರುವ ಮನೆಗಳನ್ನು ಪರಿಶೀಲಿಸಿದರು. ಸಂಬಾಗಿ ಬಡಾವಣೆ ಹಾಗೂ ಬಸವ ನಗರದಲ್ಲಿ ನಡೆದ ಪರಿಸರ ದಿನಾಚರಣೆಯಲ್ಲಿ ಪಾಲ್ಗೊಂಡು ಸಸಿ ನೆಟ್ಟರು.

ಗೋಕುಲ ರಸ್ತೆಯ ಬಸವ ನಗರದಲ್ಲಿ ನಿರ್ಮಾಣವಾಗುತ್ತಿರುವ ಉದ್ಯಾನಕ್ಕೆ ಸಿದ್ಧಾರೂಢ ಉದ್ಯಾನವನ ಎಂಬ ನಾಮಫಲಕವನ್ನು ಅನಾವರಣಗೊಳಿಸಿದರು. ಜಗದೀಶ ನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿದರು.

ADVERTISEMENT

ವಾರ್ಡ್ 44ರ ಅರವಿಂದ ನಗರದಲ್ಲಿ ನಡೆದ ಬಿಜೆಪಿ ಕಚೇರಿ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು. ಗಿರಿಜಾ ಕಲ್ಯಾಣ ಮಂಟಪದಲ್ಲಿ ಕೋವಿಡ್–19ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಅಸಂಘಟಿತ ಕಾರ್ಮಿಕರಿಗೆ ದವಸ ಧಾನ್ಯಗಳ ಕಿಟ್ ವಿತರಿಸಿದರು.

ಶಾಸಕ ಅರವಿಂದ ಬೆಲ್ಲದ, ಹುಡಾ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ, ಲಿಂಗರಾಜ ಪಾಟೀಲ, ರಾಘವೇಂದ್ರ ರಾಮದುರ್ಗ, ಸಂತೋಷ್ ಚವ್ಹಾಣ, ಮಹೇಂದ್ರ ಕವತಾಳ್,ಕೃಷ್ಣಾ ಗಂಡಗಾಳಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.