ADVERTISEMENT

ಹುಬ್ಬಳ್ಳಿ: ತಡೆಗೋಡೆ ನಿರ್ಮಾಣಕ್ಕೆ ಅಬ್ಬಯ್ಯ ಚಾಲನೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2023, 16:27 IST
Last Updated 26 ಮಾರ್ಚ್ 2023, 16:27 IST
ಹುಬ್ಬಳ್ಳಿಯ ಇಂದಿರಾ ನಗರದ ಬಳಿ ರಾಜ ಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಪ್ರಸಾದ ಅಬ್ಬಯ್ಯ ಭೂಮಿ ಪೂಜೆ ನೆರವೇರಿಸಿದರು
ಹುಬ್ಬಳ್ಳಿಯ ಇಂದಿರಾ ನಗರದ ಬಳಿ ರಾಜ ಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಪ್ರಸಾದ ಅಬ್ಬಯ್ಯ ಭೂಮಿ ಪೂಜೆ ನೆರವೇರಿಸಿದರು   

ಹುಬ್ಬಳ್ಳಿ: ‘ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗಿ ಆವಾಂತರ ಸೃಷ್ಟಿಸುತ್ತಿದ್ದ ರಾಜ ಕಾಲುವೆಗೆ ತಡೆಗೋಡೆ ನಿರ್ಮಾಣವಾಗಿರುವುದರಿಂದ ಈ ಭಾಗದ ಜನರು ನಿಟ್ಟುಸಿರು ಬಿಡುವಂತೆ ಮಾಡಲಾಗಿದೆ’ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಇಂದಿರಾ ನಗರದ ರಾಜ ಕಾಲುವೆಗೆ ₹5 ಕೋಟಿ ವೆಚ್ಚದಲ್ಲಿ ತಡೆಗೋಡೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

‘ಮಳೆ ಬಂದಾಗ ನಾಲಾಗೆ ಹೊಂದಿಕೊಂಡಿರುವ ಮನೆಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದನ್ನು ಕಣ್ಣಾರೆ ಕಂಡಿದ್ದೇನೆ. ಜನರ ಕಷ್ಟಗಳನ್ನು ಆಲಿಸಿದ್ದೇನೆ. ಅಂದು ಜನರಿಗೆ ನೀಡಿದ ಮಾತಿನಂತೆ ಸರ್ಕಾರದ ಮಟ್ಟದಲ್ಲಿ ನಿರಂತರವಾಗಿ ಹೋರಾಡಿ, ಅಧಿವೇಶನದಲ್ಲೂ ಈ ಬಗ್ಗೆ ಧ್ವನಿ ಎತ್ತಿದ್ದೇನೆ. ಅದರ ಫಲವಾಗಿ ₹5 ಕೋಟಿ ಕಾಮಗಾರಿಗೆ ಚಾಲನೆ ನೀಡಲಾಗಿದೆ’ ಎಂದರು.

ADVERTISEMENT

‘ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಉತ್ತಮ ಜೀವನ ನಡೆಸಬೇಕೆಂಬುದು ನಮ್ಮ ಗುರಿ. ಆ ನಿಟ್ಟಿನಲ್ಲಿ ಬಡವರು, ದೀನ–ದಲಿತರ ಬಡಾವಣೆ ಸೇರಿದಂತೆ ಕ್ಷೇತ್ರದಾದ್ಯಂತ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನರ ಜೀವನ ಮಟ್ಟ ಸುಧಾರಿಸಲಾಗಿದೆ’ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಸದಸ್ಯರಾದ ಹುಸೇನ್‌ಬಿ ನಾಲವತ್ವಾಡ, ಮುಖಂಡರಾದ ಬತುಲ್ ಕಿಲ್ಲೇದಾರ, ಗಂಗಾಧರ ಟಗರಗುಂಟಿ, ಪ್ರಸಾದ ಪೇರೂರು, ನಾಗೇಶ ಕತ್ರಿಮಲ್ಲ, ಶ್ರೀನಿವಾಸ ಸಾಂಬ್ರಾಣಿ, ಶ್ರೀನಿವಾಸ ರಾಮಗಿರಿ, ಗುರುನಾಥ ವಟ್ಟಪಲ್ಲಿ, ಬಾಬು ಬಳ್ಳಾರಿ, ಬಸವರಾಜ ವಟ್ಟಪಲ್ಲಿ, ನಾಗಾರ್ಜುನ ಕತ್ರಿಮಲ್ಲ, ರ‍್ರಮ್ಮ ಐವರಪಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.