ADVERTISEMENT

ಹಿಜಾಬ್ ವಿವಾದ: ಸಂವಿಧಾನ ಪೀಠಕ್ಕೆ ವರ್ಗಾಯಿಸಲು ಜಗದೀಶ ಶೆಟ್ಟರ್ ಒತ್ತಾಯ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2022, 7:58 IST
Last Updated 13 ಅಕ್ಟೋಬರ್ 2022, 7:58 IST
ಜಗದೀಶ್‌ ಶೆಟ್ಟರ್‌
ಜಗದೀಶ್‌ ಶೆಟ್ಟರ್‌   

ಹುಬ್ಬಳ್ಳಿ: ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಹಿಜಾಬ್ ವಿವಾದಕ್ಕೆ ಆದಷ್ಟು ಬೇಗ ಅಂತ್ಯ ಹಾಡಬೇಕು. ಅದಕ್ಕಾಗಿ, ಪ್ರಕರಣವನ್ನು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬೇಕು ಎಂದು ಶಾಸಕಜಗದೀಶ ಶೆಟ್ಟರ್ ಒತ್ತಾಯಿಸಿದರು.

ಹಿಜಾಬ್ ಕುರಿತು ಸುಪ್ರೀಂ ಕೋರ್ಟ್‌ನ ದ್ವಿ ಸದಸ್ಯ ಪೀಠದ ತೀರ್ಪು ಕುರಿತು, ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಹಿಜಾಬ್ ವಿಚಾರ ಜಗತ್ತಿನಾದ್ಯಂತ ಚರ್ಚೆಯಾಗುತ್ತಿದೆ. ಇತ್ತೀಚೆಗೆ ಇರಾನ್ ಹಾಗೂ ಇರಾಕ್ ದೇಶದಲ್ಲಿಯೂ ಮುಸ್ಲಿಂ ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದನ್ನು ವಿರೋಧಿಸುತ್ತಿದ್ದಾರೆ.‌ ಹೀಗಾಗಿ, ದೇಶದಲ್ಲಿ ಈ ವಿವಾದಕ್ಕೆ ಬೇಗ ಅಂತ್ಯ ಹಾಡಬೇಕು ಎಂದರು.

ADVERTISEMENT

ಹಗುರ ಮಾತು ಸಲ್ಲ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು, ಪ್ರಧಾನಿ ಮೋದಿ ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಐದು ವರ್ಷ ಮುಖ್ಯಮಂತ್ರಿಯಾಗಿದ್ದವರು ಹಾಗೂ ಪ್ರಸ್ತುತ ವಿರೋಧ ಪಕ್ಷದ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರಿಗೆ, ಹೇಗೆ ಮಾತನಾಡಬೇಕು ಎಂದು ಹೇಳುವ ಪರಿಸ್ಥಿತಿ ಬಂದಿದೆ. ಜವಾಬ್ದಾರಿ ಸ್ಥಾನ ನಿಭಾಯಿಸಿದವರು ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಆರ್ ಎಸ್ ಎಸ್ ಕಾರ್ಯಕರ್ತರ ಮೇಲೆ ಹಲ್ಲೆಗಳಾಗುತ್ತಿವೆ. ಇದರಿಂದ ಸಮಾಜದಲ್ಲಿ ಕ್ಷೋಭೆ ಉಂಟಾಗುತ್ತದೆ. ರಾಜ್ಯ ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸೂಕ್ತವಾಗಿ ನಿಭಾಯಿಸುತ್ತದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.