ಶಾಸಕ ಮಹೇಶ ಟೆಂಗಿನಕಾಯಿ
ಹುಬ್ಬಳ್ಳಿ: 'ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈ ಪ್ರಕರಣದಲ್ಲಿ ಎಸ್ ಐಟಿ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸುತ್ತಿರುವ ಲಕ್ಷಣ ಗೋಚರಿಸುತ್ತಿಲ್ಲ' ಎಂದರು.
'ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂಬುದು ನಮ್ಮ ಆಗ್ರಹವೂ ಆಗಿದೆ. ಯಾರನ್ನೂ ಕ್ಷಮಿಸುವ ಮಾತಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಬಗ್ಗೆ ಸ್ಪಷ್ಟವಾಗಿ ಹೇಳಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸಬೇಕು' ಎಂದು ಆಗ್ರಹಿಸಿದರು.
'ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸುವ ಕುರಿತಾಗಿ ಮೇ 11 ರಂದು ಬೆಂಗಳೂರಿನಲ್ಲಿ ನಡೆಯುವ ಲೋಕಸಭಾ ಚುನಾವಣೆಯ ಅವಲೋಕನಾ ಸಭೆಯಲ್ಲಿ ವರಿಷ್ಠರು ತೀರ್ಮಾನ ಕೈಗೊಳ್ಳುವರು' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.