ADVERTISEMENT

ಬಸವರಾಜ ಹೊರಟ್ಟಿ ಕಾರು ಅಪಘಾತ: ದ್ವಿಚಕ್ರ ವಾಹನ ಸವಾರನಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2022, 9:38 IST
Last Updated 7 ಆಗಸ್ಟ್ 2022, 9:38 IST
   

ಹುಬ್ಬಳ್ಳಿ: ಇಲ್ಲಿನ ಬಿ.ವಿ.ಬಿ ಕಾಲೇಜಿನಲ್ಲಿ ಭಾನುವಾರ ನಡೆದ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರ ಕಾರು ಅಪಘಾತಕ್ಕೀಡಾಗಿದೆ.

ಹೊರಟ್ಟಿಯವರ ಕಾರು ಎದುರಿಗೆ ಬರುತ್ತಿದ್ದದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್‌ಸವಾರ ಕೆಂಚಪ್ಪ ಗೂಡಣ್ಣನವರ ಅವರಿಗೆ ಗಾಯವಾಗಿದೆ.

ಘಟನೆ ನಡೆದ 10 ನಿಮಿಷ ಸ್ಥಳದಲ್ಲಿದ್ದ ಹೊರಟ್ಟಿ, ನಂತರ ಅಲ್ಲಿಂದ ಮತ್ತೊಂದು ವಾಹನದಲ್ಲಿ ತೆರಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.