ADVERTISEMENT

ಧಾರವಾಡ | ‘ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ’

ಕೃಷಿ ವಿಶ್ವವಿದ್ಯಾಲಯದ 39ನೇ ಸಂಸ್ಥಾಪನಾ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2025, 2:59 IST
Last Updated 11 ಅಕ್ಟೋಬರ್ 2025, 2:59 IST
ಧಾರವಾಡದ ಕೃಷಿ ವಿಶ್ವವಿದ್ಯಾಲಯದ 39 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು
ಧಾರವಾಡದ ಕೃಷಿ ವಿಶ್ವವಿದ್ಯಾಲಯದ 39 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು   

ಧಾರವಾಡ: ‘ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು. ತಂತ್ರಜ್ಞಾನ, ಯಂತ್ರೋಪಕರಣ ಬಳಸಿಕೊಂಡು ರೈತರು ಆರ್ಥಿಕ ಅಭಿವೃದ್ಧಿ ಸಾಧಿಸಬೇಕು’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಶುಕ್ರವಾರ ನಡೆದ ಕೃಷಿ ವಿಶ್ವವಿದ್ಯಾಲಯದ 39ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಕೃಷಿ ವಿಶ್ವವಿದ್ಯಾಲಯಗಳು, ಕೃಷಿ ಕಾಲೇಜುಗಳು, ಸಂಶೋಧನಾ ಕೇಂದ್ರಗಳು, ಕೃಷಿ ಇಲಾಖೆಯವರು ಕೃಷಿ ಕ್ಷೇತ್ರದಲ್ಲಿ ಸಂಶೋಧನೆ ಹಾಗೂ ಕೃಷಿ ವಿಸ್ತರಣಾ ಕಾರ್ಯ ಚಟುವಟಿಕೆಗಳನ್ನು ಉತ್ತೇಜಿಸಿ ಕೃಷಿ ಬಲವರ್ಧನೆಗೆ ಆದ್ಯತೆ ನೀಡಬೇಕು. ಖಾಸಗಿ ಕೃಷಿ ಕಾಲೇಜುಗಳನ್ನು ಸ್ಥಾಪಿಸುವ ಮೂಲಕ ಕೃಷಿ ಶೈಕ್ಷಣಿಕ ಚಟುವಟಿಕೆಗಳನ್ನು ವಿಸ್ತರಿಸಿ, ಪ್ರೋತ್ಸಾಹಿಸಲು ರಾಜ್ಯ ಸರ್ಕಾರವು ಕ್ರಮ ವಹಿಸಿದೆ’ ಎಂದು ಹೇಳಿದರು. 

ADVERTISEMENT

‘ಕೃಷಿ ಪದ್ದತಿಯಲ್ಲಿ ಹೆಚ್ಚು ಇಳುವರಿ ಹಾಗೂ ಆರ್ಥಿಕವಾಗಿ ಸದೃಢರಾಗಲು ಅನೇಕ ಹೊಸ ಪದ್ಧತಿಗಳನ್ನು ಕೃಷಿ ವಿಜ್ಞಾನಿಗಳು ಪರಿಚಯಿಸುತ್ತಿದ್ದಾರೆ. ರೈತರು ಹೊಸ ಪದ್ಧತಿಗಳನ್ನು ಜ್ಞಾನವನ್ನು ಪಡೆದುಕೊಂಡು ಕೃಷಿ ಉದ್ಯಮಿಗಳಾಗಬೇಕು’ ಎಂದರು.

‘ಧಾರವಾಡ ಕೃಷಿ ವಿಶ್ವವಿದ್ಯಾಲಯವು ಈವರೆಗೆ 267 ವಿವಿಧ ಬೆಳೆ ತಳಿಗಳು, 241 ಉತ್ಪಾದನಾ ತಂತ್ರಜ್ಞಾನಗಳು ಹಾಗೂ ಬೆಳೆ ಸಂರಕ್ಷಣೆ ವಿಭಾಗದಲ್ಲಿ 331 ತಾಂತ್ರಿಕತೆಗಳನ್ನು ಅಭಿವೃದ್ಧಿ ಪಡಿಸಿದೆ. ಒಟ್ಟಾರೆ 1139 ತಂತ್ರಜ್ಞಾನಗಳು ಅಭಿವೃದ್ಧಿಪಡಿಸಿದೆ’ ಎಂದು ತಿಳಿಸಿದರು. 

‘ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ (ಪಿಎಂಎಫ್‍ಎಂಇ) ಯೋಜನೆಯಡಿ ರೈತ ಉತ್ಪಾದಕ ಸಂಸ್ಥೆಗಳಿಗೆ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ನೀಡುವ ಸಹಾಯಧನವನ್ನು ಸದುಪಯೋಗಪಡಿಸಿಕೊಳ್ಳಬೇಕು. ರೈತ ಉತ್ಪಾದಕ ಸಂಸ್ಥೆಗಳು (ಎಫ್‍ಪಿಒ) ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ₹ 3 ಕೋಟಿ ವರೆಗೆ ಸಹಾಯಧನ ನೀಡಲಾಗುತ್ತಿದೆ’ ಎಂದರು.

ಯುವ ವಿಜ್ಞಾನಿ ಪ್ರಶಸ್ತಿ ಹಾಗೂ ವಿವಿದ ವಿಭಾಗಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ  ಮಾಡಲಾಯಿತು.

ಶಾಸಕ ರವಿಕುಮಾರಕುಮಾರ ಗಾಣೀಗ, ವಿಧಾನ ಪರಿಷತ್ತಿನ ಸದಸ್ಯ ಮಧು ಮಾದೇಗೌಡ ಆಡಳಿತ ಮಂಡಳಿಯ ಸದಸ್ಯರಾದ ಪಾರ್ವತಿ ಎಸ್.ಕುರ್ಲೆ, ಬಸವರಾಜ ಕುಂದಗೋಳಮಠ, ರವಿಕುಮಾರ ಮಾಳಿಗೇರ, ಕುಲಸಚಿವೆ ಜಯಶ್ರೀ ಶಿಂತ್ರಿ, ಸಂಶೋಧನಾ ನಿರ್ದೇಶಕ ಬಿ.ಡಿ.ಬಿರಾದಾರ, ವಿಸ್ತರಣಾ ನಿರ್ದೇಶಕ ಎಂ.ಎ.ಮಂಜುನಾಥ, ವಾಸುದೇವ ಆರ್. ಇದ್ದರು.

ಪಿಎಂಎಫ್‍ಎಂಇ ಯೋಜನೆ ಪ್ರಯೋಜನ ಪಡೆಯಲು ಸಲಹೆ ಧಾರವಾಡ ಕೃಷಿ ವಿ.ವಿ: ಈವರೆಗೆ 1139 ತಂತ್ರಜ್ಞಾನ ಅಭಿವೃದ್ಧಿ ಹೊಸ ಪದ್ಧತಿಗಳನ್ನು ತಿಳಿದುಕೊಳ್ಳಲು ರೈತರಿಗೆ ಸಲಹೆ

ಕೃಷಿ ವಿಶ್ವವಿದ್ಯಾಯದಿಂದ ಹೊಸ ತಳಿಗಳನ್ನು ಅಭಿವೃದ್ಧಿಪಡಿಸಿ ರೈತರಿಗೆ ನೀಡಲಾಗುತ್ತಿದೆ. ವಿಜ್ಞಾನಿಗಳು ರೈತರಿಗೆ ಸಮಗ್ರ ಕೃಷಿ ಪದ್ಧತಿ ಆಹಾರ ಮೌಲ್ಯವರ್ಧನೆ ತಂತ್ರಜ್ಞಾನಗಳ ಬಗ್ಗೆ ಅರಿವು ಮೂಡಿಸಿ ರೈತರ ಆದಾಯ ಹೆಚ್ಚಿಸಲು ಶ್ರಮಿಸಬೇಕು
ಪಿ.ಎಲ್.ಪಾಟೀಲ ಕುಲಪತಿ ಕೃಷಿ ವಿವಿ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.