ADVERTISEMENT

ನಿವೃತ್ತಿ ಉಪದಾನ ಸೌಲಭ್ಯ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 30 ಮೇ 2025, 13:37 IST
Last Updated 30 ಮೇ 2025, 13:37 IST
ನವಲಗುಂದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರು, ಸಿಬ್ಬಂದಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು
ನವಲಗುಂದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರು, ಸಿಬ್ಬಂದಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು   

ನವಲಗುಂದ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಶುಕ್ರವಾರ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು.

ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸಬೇಕು. ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸಬೇಕು. ಮನೆ ಬಾಡಿಗೆ ಕಡಿತದಿಂದ ವಿನಾಯಿತಿ ನೀಡಬೇಕು. ಶೇ 10ರಷ್ಟು ವಿಶೇಷ ಭತ್ಯೆ ಮಂಜೂರಾತಿ ಮಾಡಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ನ್ಯಾಯಯುತ ಬೇಡಿಕೆ ಈಡೇರಿಕೆ ಸಂಬಂಧ ಈಗಾಗಲೇ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ ಪರಿಹಾರ ಸಿಕ್ಕಿಲ್ಲ. ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ತರಗತಿಗಳನ್ನು ಬಹಿಷ್ಕರಿಸುವ ಜೊತೆಗೆ ವಿವಿಧ ಮಾದರಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ADVERTISEMENT

ವಸತಿ ಶಾಲೆ ಪ್ರಾಂಶುಪಾಲರಾದ ರಮೇಶ ಕಬ್ಬೇರಳ್ಳಿ, ಮಹಾದೇವ ಜಾಧವ, ನಾಗರಾಜ ಗಂಗಾವತಿ, ಜಂಬುನಾಥ ಬೆಂತೂರ, ಮಂಜುನಾಥ ಮುಧೋಳ, ಶ್ರೀದೇವಿ ಪೂಜಾರ, ಅಪರ್ಣಾ ಭಟ್, ನಂದಾ ಶಿಂಧೆ, ನಾಜರೀನ ಜಾಗಿರದಾರ ಇತರರು ಪ್ರತಿಭಟನೆಯಲ್ಲಿ  ಭಾಗವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.