ನವಲಗುಂದ: ರಾಜ್ಯ ಸರ್ಕಾರಿ ನೌಕರರ ಹಿತ ಕಾಪಾಡುವ ನಿಟ್ಟಿನಲ್ಲಿ 7ನೇ ವೇತನ ಆಯೋಗದ ವರದಿ ಜಾರಿಗೊಳಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿರುವುದನ್ನು ಸ್ವಾಗತಿಸಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ.ಬಿ.ಕೊಪ್ಪದ ತಿಳಿಸಿದ್ದಾರೆ
ನೌಕರರ ಬಹುದಿನಗಳ ಬೇಡಿಕೆಯನ್ನು ಈಡೇರಿಸುವ ಮೂಲಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದರು. 7ನೇ ವೇತನ ಆಯೋಗದ ವರದಿ ಜಾರಿಯಿಂದ ನೌಕರರ ವೇತನ ಶೇ 27.5 ರಷ್ಟು ಹೆಚ್ಚಳವಾಗಲಿದೆ. ಈಗಾಗಲೇ ಶೇ 17 ರಷ್ಟು ಹೆಚ್ಚಳ ಪಡೆದಿರುವ ನೌಕರರಿಗೆ ಹೆಚ್ಚುವರಿ ಶೇ 10.5 ರಷ್ಟು ಏರಿಕೆ ಲಾಭ ಸಿಗಲಿದೆ. ಈವರೆಗೆ ₹ 17 ಸಾವಿರ ಇದ್ದ ಕನಿಷ್ಠ ವೇತನ ಪರಿಷ್ಕರಣೆ ಶಿಫಾರಿಸ್ಸಿನಂತೆ ₹ 27 ಸಾವಿರಕ್ಕೆ ಹೆಚ್ಚಳವಾಗಲಿದೆ ಎಂದು ಹೇಳಿದರು.
ನೌಕರರ ವೇತನ, ವೇತನ ಸಂಬಂಧಿತ ಭತ್ಯೆ ಪಿಂಚಣಿ, ಮನೆ ಬಾಡಿಗೆ ಭತ್ಯೆ ಹೆಚ್ಚಳದೊಂದಿಗೆ ಆರ್ಥಿಕ ಸೌಲಭ್ಯಗಳ ಹೆಚ್ಚಳಕ್ಕೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಾಗಿದೆ. ನೌಕರರ ಸಂಘಗಳ ಬೇಡಿಕೆಯನ್ನು ಈಡೇರಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರಿಗೆ ಈ ಮೂಲಕ ಅಭಿನಂದನೆ ಸಲ್ಲಿಸಲಾಗುವುದು ಎಂದು ಅಧ್ಯಕ್ಷ ಎ.ಬಿ.ಕೊಪ್ಪದ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.