
ಪ್ರಜಾವಾಣಿ ವಾರ್ತೆ
ಧಾರವಾಡ: ಬೆಂಬಲ ಬೆಲೆಯಲ್ಲಿ (ಎಂಎಸ್ ಪಿ) ಉದ್ದು ಖರೀದಿಸಬೇಕು, ತೇವಾಂಶ ಹೆಚ್ಚು ಇದೆ ಎಂದು ಉದ್ದಿನಕಾಳು ತಿರಸ್ಕರಿಸಬಾರದು ಎಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಉದ್ದು ತುಂಬಿದ್ದ ಚೀಲಗಳ ಟ್ರಾಕ್ಟರ್ ಗಳನ್ನು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಿಲ್ಲಿಸಿದ್ದಾರೆ.
ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ರೈತ ಮುಖಂಡ ಗಂಗಾಂಧರ ಪಾಟೀಲ ಕುಲಕರ್ಣಿ ಮಾತನಾಡಿ, ಉದ್ದಿನ ಕಾಳು ತಿರಸ್ಕರಿಸಬಾರದು, ಬೆಳೆ ಹಾನಿ ಪರಿಹಾರ ನೀಡಬೇಕು, ಬೆಳೆ ವಿಮೆ ಮೊತ್ತ ನೀಡಬೇಕು ಎಂದು ಆಗ್ರಹಿಸಿದರು.
ಮಾಜಿ ಶಾಸಕ ಅಮೃತ್ ದೇಸಾಯಿ,
ಮಾಜಿ ಶಾಸಕಿ ಸೀಮಾ ಮಸೂತಿ, ಮೋಹನ ರಾಮದುರ್ಗ ಪ್ರತಿಭಟನೆಯಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.