ಧಾರವಾಡ: ತಾಲ್ಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಶನಿವಾರ, ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಪರಸಪ್ಪ ಹಾದಿಮನಿ (56) ಮೃತರು. ಕೊಲೆ ಆರೋಪಿ ದ್ಯಾಮಪ್ಪ ಬಡಿಗೇರ ಪರಾರಿಯಾಗಿದ್ದಾನೆ.
‘ಪರಸಪ್ಪ ಮತ್ತು ದ್ಯಾಮಪ್ಪ ಅಕ್ಕಪಕ್ಕದ ಮನೆಯವರು. ಮನೆಯ ಗೋಡೆ ವಿಚಾರವಾಗಿ ನಡೆದ ಜಗಳ ತಾರಕಕ್ಕೇರಿ ಹೊಡೆದಾಟಕ್ಕೆ ತಿರುಗಿದೆ. ಪರಸಪ್ಪ ಎದೆಗೆ ದ್ಯಾಮಪ್ಪ ಚಾಕುವಿನಿಂದ ಇರಿದಿದ್ದಾನೆ. ಪರಾರಿಯಾಗಿರುವ ಆರೋಪಿ ಪತ್ತೆಗೆ ಬಲೆ ಬೀಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ಧಾರೆ.
ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.