ADVERTISEMENT

ಹುಬ್ಬಳ್ಳಿ: ನೇಹಾ ಹಿರೇಮಠ ಮನೆಗೆ ಸಿಐಡಿ ತಂಡ ಭೇಟಿ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2024, 6:57 IST
Last Updated 25 ಏಪ್ರಿಲ್ 2024, 6:57 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಹುಬ್ಬಳ್ಳಿ: ಇಲ್ಲಿನ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ತಂಡ ಇಲ್ಲಿನ ಬಿಡನಾಳದಲ್ಲಿರುವ ಅವರ ಮನೆಗೆ ಗುರುವಾರ ಭೇಟಿ ನೀಡಿ ಮಾಹಿತಿ ಪಡೆಯುತ್ತಿದೆ.

ಸಿಐಡಿ ಎಸ್.ಪಿ. ವೆಂಕಟೇಶ ನೇತೃತ್ವದ ತಂಡ ನೇಹಾ ಅವರ ತಂದೆ ನಿರಂಜನಯ್ಯ ಹಿರೇಮಠ‌ ಮತ್ತು ತಾಯಿ ಗೀತಾ ಅವರಿಂದ ಕಳೆದ ಒಂದು ಗಂಟೆಯಿಂದ ಮಾಹಿತಿ ಕಲೆ ಹಾಕುತ್ತಿದೆ.

ADVERTISEMENT

ಸಂಚಾರ ಹಾಗೂ ಅಪರಾಧ ವಿಭಾಗದ ಡಿಸಿಪಿ ರವೀಶ್ ಸಿ. ಆರ್., ತನಿಖಾ ತಂಡದ ಜತೆ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.