ಹುಬ್ಬಳ್ಳಿ: ನಗರದ ಸಂಗಮ್ ಬಾರ್ ಬಳಿ ಸಲೂನ್ ಶಾಪ್‌ಗೆ ಬಂದಿದ್ದ ರಮೇಶ ಬಾಂಡಗೆ ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಹಲವು ಬಾರಿ ಚಾಕುವಿನಿಂದ ಇರಿದಿದ್ದರಿಂದ ತೀವ್ರವಾಗಿ ಗಾಯಗೊಂಡು ರಕ್ತಸ್ರಾವ ಆಗಿತ್ತು.
ಸ್ಪಿರಿಟ್ ಮಾರಾಟಕ್ಕೆ ಸಂಬಂಧಿಸಿದಂತೆ ಹಲವು ಪ್ರಕರಣಗಳನ್ನು ರಮೇಶ ವಿರುದ್ಧ ದಾಖಲಿಸಲಾಗಿತ್ತು.
ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.