ಹುಬ್ಬಳ್ಳಿ: ‘ಭಾರತದಲ್ಲಿ ಪಾಕಿಸ್ತಾನದ ಹಾಕಿ ಆಟಗಾರರಿಗೆ ಮತ್ತು ಬಾಂಗ್ಲಾದೇಶದಲ್ಲಿ ಆಡಲು ಭಾರತೀಯ ಕ್ರಿಕೆಟ್ ಆಟಗಾರರಿಗೆ ಅವಕಾಶ ನೀಡಿರುವ ಕೇಂದ್ರ ಸರ್ಕಾರದ ಕ್ರಮ ಸರಿಯಿಲ್ಲ. ಈ ಕೂಡಲೇ ಎರಡೂ ದೇಶಗಳೊಂದಿಗೆ ಕ್ರೀಡಾ ಚಟುವಟಿಕೆ ನಿಷೇಧಿಸಬೇಕು’ ಎಂದು ಶ್ರೀರಾಮ ಸೇನಾ ಸಂಘಟನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಮೋದ ಮುತಾಲಿಕ್ ಒತ್ತಾಯಿಸಿದರು.
‘ಎರಡೂ ದೇಶಗಳಲ್ಲಿ ಹಿಂದೂಗಳ ಪರಿಸ್ಥಿತಿ ದಯನೀಯವಾಗಿದೆ. ಕಾಶ್ಮೀರದ ಪಹಲ್ಗಾಮ್ ದಾಳಿಯ ಬಳಿಕ ಕೇಂದ್ರ ಸರ್ಕಾರವು ಪಾಕಿಸ್ತಾನದ ಜೊತೆಗಿನ ವ್ಯಾಪಾರ ಹಾಗೂ ನೀರು ಹರಿಸುವುದನ್ನು ನಿಷೇಧಿಸಿದ್ದು ಸ್ವಾಗತಿಸಲಾಗಿತ್ತು. ಆದರೆ, ಕ್ರೀಡಾಪಟುಗಳಿಗೆ ಅವಕಾಶ ನೀಡಿರುವುದು ಆಕ್ಷೇಪಿಸಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಆರಂಭಿಸಲಾಗುವುದು’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.