ಹುಬ್ಬಳ್ಳಿ: ‘ಮಕ್ಕಳಿಗೆ ಮಹಾನ್ ವೀರರ ಇತಿಹಾಸವನ್ನು ತಿಳಿಸಬೇಕು. ಪುಸ್ತಕದ ಜ್ಞಾನವಲ್ಲದೆ ಪ್ರಾಪಂಚಿಕ ಜ್ಞಾನವನ್ನು ತಿಳಿಸಿ, ಸ್ಪರ್ಧಾತ್ಮಕ ಜಗತ್ತಿನತ್ತ ಸಾಗುವಂತೆ ಮಾಡಬೇಕು’ ಎಂದು ಹುಬ್ಬಳ್ಳಿ ಶಹರ ತಹಶೀಲ್ದಾರ್ ಕಲಗೌಡ ಪಾಟೀಲ ಹೇಳಿದರು.
ಇಲ್ಲಿನ ಮಿನಿವಿಧಾನ ಸೌಧದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಕೆಂಪೇಗೌಡ ಅವರು ಬೆಂಗಳೂರು ನಗರ ಕಟ್ಟಿ ಬೆಳೆಸಿದರು. ಇಂದು ಬೆಂಗಳೂರು ನಗರ ಸಾಕಷ್ಟು ಅಭಿವೃದ್ಧಿ ಕಂಡು, ಸಿಲಿಕಾನ್ ಸಿಟಿ ಎಂದು ಹೆಸರಾಗಿದೆ’ ಎಂದರು.
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಬಸವರಾಜ ಹೊಸಮನಿ ಅವರು ಉಪನ್ಯಾಸ ನೀಡಿದರು.
ಗ್ರಾಮೀಣ ತಹಶೀಲ್ದಾರ್ ಜೆ.ಬಿ. ಮಜ್ಜಗಿ, ಗ್ರಾಮೀಣ ಬಿಇಒ ಉಮೇಶ ಬೊಮಕ್ಕನವರ, ಶಿವಾನಂದ ನಸಬಿ, ಸಂಜೀವ ದುಮ್ಮಕನಾಳ, ರಂಜಾನ್ ಕಿಲ್ಲೆದ, ಗೋಪಾಲ ಹಾಗೂ ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.