
ಪ್ರಜಾವಾಣಿ ವಾರ್ತೆ
ಧಾರವಾಡ: ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಟ್ರಸ್ಟ್ ನೀಡುವ ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಪ್ರಶಸ್ತಿಗೆ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಲಾವಿದೆ ಪುಣೆಯ ಅಲಕಾದೇವ್ ಮಾರುಲ್ಕರ್, ಯುವಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆಯ ಗಾಯಕ ಹರೀಶ ಹೆಗಡೆ, ಗದಗಿನ ತಬಲಾ ವಾದಕ ನಾಗಲಿಂಗ ಮುರಗಿ ಆಯ್ಕೆಯಾಗಿದ್ದಾರೆ.
ರಾಷ್ಟ್ರೀಯ ಪುರಸ್ಕಾರ ₹ 1 ಲಕ್ಷ ನಗದು ಹಾಗೂ ಯುವ ಪ್ರಶಸ್ತಿಯು ₹ 25 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ. ಡಿ.31 ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.