ಧಾರವಾಡ: ನಗರದ ಸ್ವರ ಸಾಮ್ರಾಟ ಪಂಡಿತ ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನೀಡುವ ಸ್ವರ ಸಾಮ್ರಾಟ ಪಂಡಿತ ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿಗೆ ಗಾಯಕ ಬೆಂಗಳೂರಿನ ವಿನಾಯಕ ತೊರವಿ, ರಾಷ್ಟ್ರೀಯ ಯುವ ಪ್ರಶಸ್ತಿಗೆ ಧಾರವಾಡದ ಸಿತಾರ್ ವಾದಕ ಮೊಹಸಿನ್ ಖಾನ್ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಿಂದೂಸ್ಥಾನಿ ಶಾಸ್ತ್ರೀಯ ಗಾಯಕ ವಿಶಾಲ ಹೆಗಡೆ ಆಯ್ಕೆಯಾಗಿದ್ಧಾರೆ.
ರಾಷ್ಟ್ರೀಯ ಪ್ರಶಸ್ತಿ ₹ 1 ಲಕ್ಷ ನಗದು, ಫಲಕ ಮತ್ತು ರಾಷ್ಟ್ರೀಯ ಯುವ ಪ್ರಶಸ್ತಿ ತಲಾ ₹ 25 ಸಾವಿರ ನಗದು, ಫಲಕ ಒಳಗೊಂಡಿದೆ. ಧಾರವಾಡದಲ್ಲಿ ಆಗಸ್ಟ್ 24ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.