ADVERTISEMENT

ಹುಬ್ಬಳ್ಳಿ: ಕಳಸಾ ಬಂಡೂರಿ ಜಾರಿಗೆ ಆಗ್ರಹ, ಟೋಲ್ ಬಂದ್ ಮಾಡಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2021, 7:34 IST
Last Updated 26 ನವೆಂಬರ್ 2021, 7:34 IST
ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಸದಸ್ಯರು ಹುಬ್ಬಳ್ಳಿ ನಗರದ ಗಬ್ಬೂರು ಬೈ ಪಾಸ್ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಸದಸ್ಯರು ಹುಬ್ಬಳ್ಳಿ ನಗರದ ಗಬ್ಬೂರು ಬೈ ಪಾಸ್ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.   

ಹುಬ್ಬಳ್ಳಿ: ಕೃಷಿ ಕಾಯ್ದೆ ಹಿಂಪಡೆಯುವುದು, ಸ್ವಾಮಿನಾಥನ್ ಆಯೋಗದ ವರದಿ ಜಾರಿ ಹಾಗೂ ಕಳಸಾ ಬಂಡೂರಿ ಕಾಮಗಾರಿ ತಕ್ಷಣ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಸದಸ್ಯರು ನಗರದ ಗಬ್ಬೂರು ಬೈ ಪಾಸ್ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಹತ್ತು ನಿಮಿಷ ಟೋಲ್ ಬಂದ್ ಮಾಡಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದ ಪ್ರತಿಭಟನಾಕಾರರು, ನಂತರ ಬೆಂಗಳೂರು-ಪೂನಾ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ‌ ಧರಣಿ ಕುಳಿತರು.

ಕೃಷಿ ಕಾಯ್ದೆ ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಆದರೆ, ಅದು ಭರವಸೆಯಷ್ಟೇ ಆಗದೆ ಕಾರ್ಯರೂಪಕ್ಕೆ ಬರಬೇಕು. ಕಳಸಾ ಬಂಡೂರಿ ಯೋಜನೆ ಕಾಮಗಾರಿ ಸಹ ಆರಂಭವಾಗುತ್ತಿಲ್ಲ. ಅದನ್ನು ಸಹ ತಕ್ಷಣ ಆರಂಭಿಸಬೇಕು. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕಾನೂನು‌ ರಚನೆಯಾಗಬೇಕು. ಅತಿವೃಷ್ಟಿಯಿಂದಾದ ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಸಿದ್ದು ತೇಜಿ, ಬಾಬಾಜಾನ ಮೂದೋಳ , ರಾಜಶೇಖರ‌ ಮೆಣಸಿನಕಾಯಿ, ಇಮ್ತಿಯಾಜ್ ಬಿಳಿಪಸಾರ, ಶೋಬಾ ಕಮತರ, ಬಿ.ಎ. ಮೂದೋಳ. ಎ.ಎಸ್. ಫಿರ್ಜಾದೆ, ಹಾಲಬಾವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.