
ಸಲೀಂ ಅಹ್ಮದ್
ಹುಬ್ಬಳ್ಳಿ: ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ನರೇಗಾ) ಹೆಸರು ಬದಲಿಸಿದ ಕೇಂದ್ರ ಸರ್ಕಾರದ ನೀತಿ ಖಂಡಿಸಿ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ) ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ, ಜ.5ರಂದು ದೇಶದಾದ್ಯಂಂತ ಬೃಹತ್ ಪ್ರತಿಭಟನೆ ನಡೆಸಲಾಗುವುದು’ ಎಂದು ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರವು ಯೋಜನೆಯಲ್ಲಿರುವ ಗಾಂಧಿ ಹೆಸರನ್ನು ತೆಗೆದು ರಾಜಕೀಯ ಮಾಡಲು ಮುಂದಾಗಿದೆ’ ಎಂದು ಆರೋಪಿಸಿದರು.
‘ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ದೂರದೃಷ್ಟಿ ಇಟ್ಟುಕೊಂಡು ನರೇಗಾ ಯೋಜನೆ ಜಾರಿಗೆ ತಂದಿತ್ತು. ಆರ್ಥಿಕವಾಗಿ ಹಿಂದುಳಿದವರಿಗೆ ಸಾಂವಿಧಾನಿಕವಾಗಿ ಉದ್ಯೋಗ ಖಾತರಿ ಹಕ್ಕು ನೀಡಿತ್ತು. ಆದರೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅದರಲ್ಲಿನ ಅನುದಾನದ ಪಾಲನ್ನು 60:40 ಹಂಚಿಕೆ ಮಾಡಿ, ರಾಜ್ಯ ಸರ್ಕಾರದ ಮೇಲೆ ಹೆಚ್ಚು ಹೊರೆ ಹಾಕುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.