ADVERTISEMENT

ನವಲಗುಂದ: ಗೊಬ್ಬರ ದಾಸ್ತಾನು ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2025, 15:46 IST
Last Updated 2 ಜುಲೈ 2025, 15:46 IST
ನವಲಗುಂದ ಪಟ್ಟಣದಲ್ಲಿರುವ ಬೀಜ, ಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಸುಧೀರ ಸಾಹುಕಾರ ಭೇಟಿ ನೀಡಿ, ಮಾಹಿತಿ ಪಡೆದರು
ನವಲಗುಂದ ಪಟ್ಟಣದಲ್ಲಿರುವ ಬೀಜ, ಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಸುಧೀರ ಸಾಹುಕಾರ ಭೇಟಿ ನೀಡಿ, ಮಾಹಿತಿ ಪಡೆದರು   

ನವಲಗುಂದ: ಪಟ್ಟಣದ ರಸಗೊಬ್ಬರ ಹಾಗೂ ಕ್ರಿಮಿನಾಶಕ ಮಾರಾಟ ಮಳಿಗೆಗೆ ಮಂಗಳವಾರ ತಹಶೀಲ್ದಾರ್ ಸುಧೀರ ಸಾಹುಕಾರ ಭೇಟಿ ನೀಡಿ, ಗೊಬ್ಬರ ದಾಸ್ತಾನು, ಬಿತ್ತನೆ ಬೀಜ ಮಾರಾಟ ಕುರಿತು ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು, ‘ಜಿಲ್ಲಾಧಿಕಾರಿ ಅವರ ಸೂಚನೆಯಂತೆ ಬೀಜ ಹಾಗೂ ಗೊಬ್ಬರ ಮಾರಾಟ ಮಳಿಗೆಗಳಿಗೆ ಭೇಟಿ ನೀಡಲಾಗುತ್ತಿದ್ದು, ಡಿಎಪಿ ಹಾಗೂ ಯೂರಿಯಾ ಗೊಬ್ಬರ ದಾಸ್ತಾನು ಪರಿಶೀಲಿಸಿ ಕೃತಕ ಅಭಾವ ಸೃಷ್ಟಿಸದಂತೆ ಹಾಗೂ ಕಳಪೆ ಬಿತ್ತನೆ ಬೀಜ ಮಾರಾಟ ಮಾಡದಂತೆ ಸೂಚಿಸಲಾಗಿದೆ‘ ಎಂದರು.

‘ಹಲೆವೆಡೆ ಯೂರಿಯಾ ಹಾಗೂ ಡಿಎಪಿ ಗೊಬ್ಬರದ ಅಭಾವವಿದ್ದು, ರೈತರು ಡಿಎಪಿ ಗೊಬ್ಬರಕ್ಕಾಗಿ ಅಲೆದಾಡುವಂತಾಗಿದೆ. ಕೆಲ ಗೊಬ್ಬರ ಅಂಗಡಿ ಮಾಲೀಕರು ಡಿಎಪಿ ಸಾಕಷ್ಟು ದಾಸ್ತಾನು ಇದ್ದರೂ ಕೃತಕ ಅಭಾವ ಸೃಷ್ಟಿಸುತ್ತಿದ್ಧಾರೆ ಎಂಬ ದೂರುಗಳು ಬಂದಿವೆ. ಈ ಬಗ್ಗೆ ಪರಿಶೀಲಿಸಿ, ಎಚ್ಚರಿಕೆ ನೀಡಲಾಗಿದೆ‘ ಎಂದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.