ADVERTISEMENT

ನವಲಗುಂದ: ಅವ್ಯವಹಾರ ತನಿಖೆಗೆ ಗ್ರಾಮಸ್ಥರ ಮನವಿ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2025, 4:53 IST
Last Updated 21 ಆಗಸ್ಟ್ 2025, 4:53 IST
ನವಲಗುಂದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಲೋಕಾಯುಕ್ತರು ಆಯೋಜಿಸಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಅಳಗವಾಡಿ ಗ್ರಾಮಸ್ಥರು ಮನವಿ ಸಲ್ಲಿಸಿದರು 
ನವಲಗುಂದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಲೋಕಾಯುಕ್ತರು ಆಯೋಜಿಸಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಅಳಗವಾಡಿ ಗ್ರಾಮಸ್ಥರು ಮನವಿ ಸಲ್ಲಿಸಿದರು    

ನವಲಗುಂದ: ತಾಲ್ಲೂಕಿನ ಅಳಗವಾಡಿ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಯೋಜನೆಯಡಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದೆ. ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒಗಳು ಸೇರಿ ಸರ್ಕಾರಿ ಜಾಗವನ್ನು ಅಧ್ಯಕ್ಷರ ಕುಟುಂಬದವರ ಹೆಸರಿಗೆ ಬದಲಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಅಳಗವಾಡಿ ಗ್ರಾಮಸ್ಥರು ಬುಧವಾರ ಜಿಲ್ಲಾ ಲೋಕಾಯುಕ್ತ ಎಸ್ಪಿ ಎಸ್.ಟಿ.ಸಿದ್ಧಲಿಂಗಪ್ಪ ಅವರಿಗೆ ದೂರು ಸಲ್ಲಿಸಿದರು.

ಇಲ್ಲಿನ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಬುಧವಾರ ಜಿಲ್ಲಾ ಲೋಕಾಯುಕ್ತ ಪೊಲೀಸರು ನಡೆಸಿದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಅಳಗವಾಡಿ ಗ್ರಾಮಸ್ಥರು, ‘ಈ ಕುರಿತು ಜಿಪಂ ಸಿಇಒ, ತಾಪಂ ಇಒ ಹಾಗೂ ತಹಶೀಲ್ದಾರರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ‘ ಎಂದು ಆರೋಪಿಸಿದರು.

ಗ್ರಾಮದ ಅಭಿವೃದ್ಧಿ ಹೆಸರಿನಲ್ಲಿ ನಕಲಿ ಬಿಲ್‌ ಸೃಷ್ಟಿಸಿ ಭ್ರಷ್ಟಾಚಾರ ನಡೆಸಲಾಗಿದೆ.  ಈ ಬಗ್ಗೆ ತನಿಖೆ ನಡೆಸಬೇಕು ಎಂದು ಮನವಿ ಮಾಡಿದರು.

ADVERTISEMENT

ಶಿರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಹೆಟ್ಟಿ ಗ್ರಾಮಸ್ಥರು, 2021 ರಿಂದ ಗ್ರಾಮ ಪಂಚಾಯಿತಿಯಲ್ಲಿ ನಡೆದ ಅವ್ಯವಹಾರ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದರು.

ಮನವಿಗೆ ಸ್ಪಂದಿಸಿದ ಲೋಕಾಯುಕ್ತರು, ಈ ಕುರಿತು ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ತಾಪಂ ಇಒ ಭಾಗ್ಯಶ್ರೀ ಜಹಗೀರದಾರ ಅವರಿಗೆ ಸೂಚಿಸಿದರು.

ನಂತರ ತಾಲ್ಲೂಕಿನ ನಾನಾ ಇಲಾಖೆಯಲ್ಲಿನ ಅಭಿವೃದ್ಧಿ ಕೆಲಸಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.  ಲೋಕಾಯುಕ್ತ ಡಿ.ಎಸ್.ಪಿ ಬಿ.ಎನ್.ಪಾಟೀಲ, ಸಿಪಿಐ ಪ್ರಸಾದ ಪನೇಕರ, ತಹಶೀಲ್ದಾರ್ ಸುಧೀರ ಸಾಹುಕಾರ, ತಾ.ಪಂ ಇಒ ಭಾಗ್ಯಶ್ರೀ ಜಹಗೀರದಾರ ಹಾಗೂ ಲೋಕಾಯುಕ್ತ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.