ADVERTISEMENT

ಹುಬ್ಬಳ್ಳಿ | ಗಡಿ ವಿವಾದ: ರಾಜಕೀಯ ಪರಿಹಾರಕ್ಕೆ ಸಲಹೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2022, 4:59 IST
Last Updated 16 ಡಿಸೆಂಬರ್ 2022, 4:59 IST
ಹುಬ್ಬಳ್ಳಿಯ ವಿಕಾಸನಗರದಲ್ಲಿರುವ ಎಎಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ಧಾರವಾಡ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿಕಾಸ ಸೊಪ್ಪಿನ ಮಾತನಾಡಿದರು. ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಅನಂತಕುಮಾರ್ ಬುಗಡಿ, ಪೂರ್ವ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಹಿರೇಮಠ, ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ಮಲ್ಲಪ್ಪ ತಡಸದ ಇದ್ದಾರೆ
ಹುಬ್ಬಳ್ಳಿಯ ವಿಕಾಸನಗರದಲ್ಲಿರುವ ಎಎಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ಧಾರವಾಡ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿಕಾಸ ಸೊಪ್ಪಿನ ಮಾತನಾಡಿದರು. ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಅನಂತಕುಮಾರ್ ಬುಗಡಿ, ಪೂರ್ವ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಹಿರೇಮಠ, ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ಮಲ್ಲಪ್ಪ ತಡಸದ ಇದ್ದಾರೆ   

ಹುಬ್ಬಳ್ಳಿ ‘ನೆಲ ಹಾಗೂ ಜಲ ವಿವಾದಗಳಿಗೆ ಕಾನೂನು ಪ್ರಕ್ರಿಯೆಗಳಿಗಿಂತ ರಾಜಕೀಯವಾಗಿ ಪರಿಹಾರದ ಕಂಡುಕೊಳ್ಳುವುದು ಉತ್ತಮ. ಕರ್ನಾಟಕ– ಮಹಾರಾಷ್ಟ್ರ ಗಡಿ ಸಮಸ್ಯೆಯಲ್ಲಿ ಇದುವರೆಗೆ ರಾಜಕೀಯ ಪರಿಹಾರ ಕಂಡುಕೊಳ್ಳದಿರುವುದು ಚೋದ್ಯದ ಸಂಗತಿ’ ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾ ಘಟಕದ ಅಧ್ಯಕ್ಷ ಅನಂತಕುಮಾರ್ ಬುಗಡಿ ಹೇಳಿದರು.

‘ಭಾಷಾವಾರು ಪ್ರಾಂತ್ಯಗಳ ರಚನೆಯಾದಾಗ ಉಲ್ಬಣಿಸಿದ ವಿವಾದಕ್ಕೆ ಇನ್ನೂ ಪರಿಹಾರ ಸಿಗದಿರುವುದಕ್ಕೆ ನಮ್ಮ ರಾಜಕೀಯದಲ್ಲಿರುವ ಬೌದ್ಧಿಕ ದಾರಿದ್ರ್ಯವೇ ಕಾರಣ’ ಎಂದು ಪಕ್ಷದ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪಕ್ಷದ ಧಾರವಾಡ ಜಿಲ್ಲಾ ಗ್ರಾಮೀಣ ಉಪಾಧ್ಯಕ್ಷ ವಿಕಾಸ ಸೊಪ್ಪಿನ ಮಾತನಾಡಿ, ‘ಕರ್ನಾಟಕ - ಮಹಾರಾಷ್ಟ್ರ ಹಾಗೂ ಕೇರಳ ಗಡಿ ಸಮಸ್ಯೆಗಳ ಪರಿಹಾರಕ್ಕಾಗಿ ಕೇಂದ್ರ ಸರಕಾರ 1966ರಲ್ಲಿ ಮಹಾಜನ್ ಆಯೋಗ ರಚಿಸಿತ್ತು. ಆಯೋಗದ ವರದಿಯನ್ನು ಮಹಾರಾಷ್ಟ್ರ ತಿರಸ್ಕರಿಸಿದರೆ, ಕರ್ನಾಟಕ ಒಪ್ಪಿಕೊಂಡಿತು. ಅಂದಿನಿಂದ ಮಹಾರಾಷ್ಟ್ರ ಗಡಿ ವಿಷಯದಲ್ಲಿ ತಕರಾರು ತೆಗೆಯುತ್ತಿದ್ದರೂ, ವಿವಾದ ತಾರ್ಕಿಕ ಅಂತ್ಯ ಕಾಣಲಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲೂ ಯಾವುದೇ ತೀರ್ಮಾನ ತೆಗೆದುಕೊಳ್ಳದೆ, ಮತ್ತೆ ಕಾನೂನು ಮೊರೆ ಹೋಗಿದ್ದು ಸರಿಯಲ್ಲ’ ಎಂದು ಅಭಿಪ್ರಾಯಪಟ್ಟರು.

ADVERTISEMENT

ಪೂರ್ವ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಹಿರೇಮಠ, ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ಮಲ್ಲಪ್ಪ ತಡಸದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.